ಬೆಂಗಳೂರು: ಮಹದೇವಪುರದಲ್ಲಿರುವ ಧರ್ಮಸ್ಥಳ ಕ್ಷೇತ್ರದ ‘ಕ್ಷೇಮವನ’ದಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು.

ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ದಿ ಮಂಡಳಿಯ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಸಸಿ ನೆಟ್ಟರು.

‘ಪರಿಸರ ಮಾಲಿನ್ಯ ತಡೆಗಟ್ಟಲು ಸಾರ್ವಜನಿಕರು, ವಿದ್ಯಾರ್ಥಿಗಳಲ್ಲಿ ಅರಿವು, ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಅರಣ್ಯವನ್ನು ಉಳಿಸಿ ಬೆಳಸುವಲ್ಲಿ ಹಲವಾರು ಮಹತ್ವದ ಪರಿಸರ ಸಂರಕ್ಷಣ ಪೂರಕ ಕಾರ್ಯಕ್ರಮಗಳನ್ನು ಇಲಾಖೆ ಕೈಗೊಂಡಿದೆ’ ಎಂದರು.

ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಎಸ್.ಈ. ಸುಧೀಂದ್ರ ಮಾತನಾಡಿ, ‘ಗೃಹ ಬಳಕೆಯ ವಸ್ತುಗಳು, ಸಾರ್ವಜನಿಕ ಸ್ಥಳಗಳಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡುವುದನ್ನು ಕಡಿಮೆ ಮಾಡಲು ಹಲವಾರು ಪರಿಸರ ಸ್ನೇಹಿ ವಸ್ತುಗಳನ್ನು ಉತ್ಪಾದನೆ ಮಾಡುವುದು ಇಂದಿನ ಅಗತ್ಯವಾಗಿದೆ’ ಎಂದರು.

ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ್ ಎಲ್, ಕ್ಷೇಮವನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರೇಂದ್ರ ಶೆಟ್ಟಿ, ನಿರ್ವಹಣಾ ವಿಭಾಗದ ಜಯರಾಮ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಲೋಹಿತ್, ಬಿ.ಆರ್, ಯೋಜನಾ ಸಮಲೋಚಕ ದಯಾನಂದ ಜಿ.ಎನ್, ಬೆಂಗಳೂರು ಗ್ರಾಮಾಂತರ ವಲಯದ ಉಪ ಅರಣ್ಯ ಸಂರಕ್ಷಣಾ ಅಧಿಕಾರಿಗಳಾದ ಸಂತೋಷ್, ಕ್ಷೇಮವನದ ಪರಿಸರ ವಿಭಾಗದ ಶುಭಾಂಶು , ಅರ್ಚನಾ ಮತ್ತಿತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.