ಮಂಗಳವಾರ, ಮಾರ್ಚ್ 28, 2023
33 °C
40 ವರ್ಷದ ವ್ಯಕ್ತಿಗೆ ಯಶಸ್ವಿ ಕಸಿ

ವಿಶ್ವ ಹೃದಯ ದಿನದಂದು ಮಿಡಿದ ಯುವಕನ ಹೃದಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಗರದ  ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿರುವ ನಾರಾಯಣ ಹಾರ್ಟ್ ಸೆಂಟರ್‌ನ ವೈದ್ಯರು  ಮಿದುಳು ನಿಷ್ಕ್ರಿಯಗೊಂಡಿದ್ದ ಯುವಕನ ಹೃದಯವನ್ನು 40 ವರ್ಷದ ಹೃದ್ರೋಗಿಗೆ ಯಶಸ್ವಿಯಾಗಿ ಕಸಿ ಮಾಡುವ ಮೂಲಕ ವಿಶ್ವ ಹೃದಯ ದಿನ ಆಚರಿಸಿದರು. 

ರಸ್ತೆ ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 26 ವರ್ಷದ ಯುವಕನಿಗೆ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದ ಪರಿಣಾಮ ವೈದ್ಯರು ಯುವಕನ ಮಿದುಳು ನಿಷ್ಕ್ರಿಯಗೊಂಡಿರುವುದಾಗಿ ಘೋಷಿಸಿ, ಕುಟುಂಬದ ಸದಸ್ಯರಿಗೆ ಅಂಗಾಂಗ ದಾನದ ಬಗ್ಗೆ ಮನವರಿಕೆ ಮಾಡಿಸಿದರು. ಕುಟುಂಬದ ಸಮ್ಮತಿಯ ಬಳಿಕ ಹೃದಯವನ್ನು ನಾರಾಯಣ ಹಾರ್ಟ್‌ ಸೆಂಟರ್‌ಗೆ ರವಾನಿಸಲಾಯಿತು. 

ಮೈಸೂರಿನ ವ್ಯಕ್ತಿ ಹೃದಯಬೇನೆ ತೊಂದರೆಯಿಂದ ನಾರಾಯಣ ಹಾರ್ಟ್‌ ಸೆಂಟರ್‌ನಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ವ್ಯಕ್ತಿಯನ್ನು ಪರೀಕ್ಷಿಸಿದ ವೈದ್ಯರು ಹೃದಯಕಸಿಗೆ ಒಳಗಾಗುವಂತೆ ಸೂಚಿಸಿದ್ದರು. ಇದರಿಂದಾಗಿ ರೋಗಿ ಜೀವಸಾರ್ಥಕತೆಯಡಿ ನಾಲ್ಕು ತಿಂಗಳ ಹಿಂದೆಯೇ ಹೆಸರು ನೋಂದಾಯಿಸಿದ್ದರು. ಯುವಕನ ಹೃದಯ ಹೋಂದಾಣಿಕೆಯಾದ ಪರಿಣಾಮ ಯಶಸ್ವಿಯಾಗಿ ಹೃದಯ ಕಸಿ ಮಾಡಲಾಯಿತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು