ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಕೇಸ್: ಯಡಿಯೂರಪ್ಪ ಧ್ವನಿ ಮಾದರಿ ಸಂಗ್ರಹ

Published 12 ಏಪ್ರಿಲ್ 2024, 16:18 IST
Last Updated 12 ಏಪ್ರಿಲ್ 2024, 16:18 IST
ಅಕ್ಷರ ಗಾತ್ರ

ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್​. ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಯಡಿಯೂರಪ್ಪ ಅವರ ಧ್ವನಿ ಮಾದರಿ ಸಂಗ್ರಹಿಸಿದ್ದಾರೆ.

ಯಡಿಯೂರಪ್ಪ ಅವರ ಮನೆಯಲ್ಲಿ ಫೆಬ್ರುವರಿ 2ರಂದು ನಡೆದಿದ್ದ ಕೃತ್ಯದ ಬಗ್ಗೆ ಬಾಲಕಿಯ ತಾಯಿ ದೂರು ನೀಡಿದ್ದರು. ಕೃತ್ಯಕ್ಕೆ ಸಂಬಂಧಪಟ್ಟಂತೆ ಕೆಲ ವಿಡಿಯೊ ಹಾಗೂ ಆಡಿಯೊ ನೀಡಿದ್ದರು. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆ ಸೆಕ್ಷನ್ 8 ಹಾಗೂ ಐಪಿಸಿ ಸೆಕ್ಷನ್ 354 (ಎ) ಅಡಿ ಸದಾಶಿವನಗರ ಠಾಣೆಯಲ್ಲಿ ಮಾರ್ಚ್‌ 14ರಂದು ಎಫ್‌ಐಆರ್ ದಾಖಲಾಗಿತ್ತು.

ಸರ್ಕಾರದ ಆದೇಶದಂತೆ ತನಿಖೆ ಆರಂಭಿಸಿರುವ ಸಿಐಡಿ ಅಧಿಕಾರಿಗಳು, ಸಿಆರ್‌ಪಿಸಿ 164 ಅಡಿ ನ್ಯಾಯಾಧೀಶರ ಎದುರು ಬಾಲಕಿಯ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ, ಧ್ವನಿಮುದ್ರಿಕೆ ಸಂಗ್ರಹಿಸುವುದಕ್ಕಾಗಿ ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿದ್ದರು.

ಅರಮನೆ ರಸ್ತೆಯಲ್ಲಿರುವ ಸಿಐಡಿ ಕಚೇರಿಗೆ ಶುಕ್ರವಾರ ಹೋಗಿದ್ದ ಯಡಿಯೂರಪ್ಪ ಅವರು ತನಿಖಾಧಿಕಾರಿ ಎದುರು ಹಾಜರಾದರು. ಅವರ ಧ್ವನಿ ಮುದ್ರಿಕೆ ದಾಖಲಿಸಿಕೊಂಡ ತನಿಖಾಧಿಕಾರಿ, ನಂತರ ವಾಪಸು ಕಳುಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT