ಪ್ರಜಾವಾಣಿ ವಾರ್ತೆ

ಬೆಂಗಳೂರು: ಸಾಹಿತಿ ಪ್ರೊ.ಎಲ್.ಎಸ್.ಶೇಷಗಿರಿರಾವ್ ಅವರ ಶತಮಾನೋತ್ಸವ ಸ್ಮರಣಾರ್ಥ ಕನ್ನಡ ಗೆಳೆಯರ ಬಳಗ ನೀಡುವ ‘ಉತ್ತಮ ಶಾಲೆ ಬಹುಮಾನ’ಕ್ಕೆ ಗದಗ ಜಿಲ್ಲೆಯ ಮುಂಡರಗಿಯ ಯಕ್ಲಾಸಪೂರದ ‘ಶ್ರೀಮತಿ ಪಾರ್ವತೆವ್ವ ಕೋಂ ಹಿರೇಬಸಪ್ಪ ಹಳೇಮನಿ ಸರ್ಕಾರಿ ಪ್ರೌಢಶಾಲೆ’ ಆಯ್ಕೆಯಾಗಿದೆ.

ಬಹುಮಾನವು ₹ 10 ಸಾವಿರ ನಗದು ಒಳಗೊಂಡಿದೆ. ಪ್ರತಿ ವರ್ಷ ಉತ್ತಮ ನಿರ್ವಹಣೆ ತೋರುವ ಕನ್ನಡ ಮಾಧ್ಯಮ ಶಾಲೆಗೆ ಈ ಬಹುಮಾನ ನೀಡಲಾಗುತ್ತಿದೆ. ಈ ಪ್ರೌಢಶಾಲೆಯಲ್ಲಿ 121 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿ ವಿಜ್ಞಾನ ಹಾಗೂ ಕಂಪ್ಯೂಟರ್ ಪ್ರಯೋಗಾಲಯ, ಸಭಾಂಗಣ ಎಲ್ಲವೂ ವ್ಯವಸ್ಥಿತವಾಗಿದೆ. ಶಾಲೆಯ ಕಟ್ಟಡವನ್ನು ಸ್ವಚ್ಛವಾಗಿ ಇರಿಸಲಾಗಿದೆ ಎಂದು ಬಳಗದ ಸಂಚಾಲಕ ರಾ.ನಂ. ಚಂದ್ರಶೇಖರ್ ತಿಳಿಸಿದ್ದಾರೆ.

ಡಿ. 9ರಂದು ಬೆಂಗಳೂರಿನ ನಯನ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.