ಶುಕ್ರವಾರ, ಜೂನ್ 18, 2021
21 °C

ಯಕ್ಷಗಾನ ಸಮಾಜದ ಅಂಕುಡೊಂಕು ತಿದ್ದುವ ಮಾಧ್ಯಮ: ಡಾ.ಸಿ.ಎ.ಕಿಶೋರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಯಕ್ಷಗಾನವು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಪರಿಣಾಮಕಾರಿ ಕಲಾ ಮಾಧ್ಯಮ. ಇದು ನಮ್ಮ ನಾಡಿನ ಹೆಮ್ಮೆಯ ಕಲೆ. ಹಲವು ಪೌರಾಣಿಕ ಕಥೆಗಳನ್ನು ಜನರ ಮನಸ್ಸಿಗೆ ಮುಟ್ಟಿಸುವಲ್ಲಿ ಯಕ್ಷಗಾನದ ಪಾತ್ರ ಮಹತ್ವದ್ದು’ ಎಂದು ಭಾರತೀಯ ಆಯುರ್ವೇದ ಪ್ರತಿಷ್ಠಾನದ ಅಧ್ಯಕ್ಷ ಡಾ.ಸಿ.ಎ.ಕಿಶೋರ್‌ ಹೇಳಿದರು.

ಕಲಾ ಕದಂಬ ಆರ್ಟ್‌ ಸೆಂಟರ್‌, ಚಿಕ್ಕಲಸಂದ್ರದ ಕೆಎಸ್‌ಆರ್‌ಟಿಸಿ ಬಡಾವಣೆಯಲ್ಲಿರುವ ಸಿದ್ಧಿ ಗಣಪತಿ ದೇವಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ 2020–21ನೇ ಸಾಲಿನ ಯಕ್ಷಗಾನ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.

ಚಂದನ ವಾಹಿನಿಯ ನಿರೂಪಕಿ ಸ್ನೇಹಾ ನೀಲಪ್ಪಗೌಡ ‘ಪುರುಷ ಕಲಾಪ್ರಕಾರವೆನಿಸಿರುವ ಯಕ್ಷಗಾನದಲ್ಲಿ ಮಹಿಳೆಯರೂ ಛಾಪು ಮೂಡಿಸುತ್ತಿರುವುದು ಖುಷಿಯ ವಿಚಾರ. ನಾವೆಲ್ಲಾ ಈ ಕಲೆಯನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕು’ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳು ‘ಕೃಷ್ಣ ಗಾರುಡಿ’ ಯಕ್ಷಗಾನ ಪ್ರದರ್ಶಿಸಿದರು. ಕಲಾ ಕದಂಬ ಸಂಸ್ಥೆಯ ನಿರ್ದೇಶಕ ರಾಧಾಕೃಷ್ಣ ಉರಾಳ ಇದನ್ನು ನಿರ್ದೇಶಿಸಿದ್ದರು.

ಸಿದ್ಧಿ ಗಣಪತಿ ದೇವಾಲಯ ಸಮಿತಿಯ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು