ರಾಜರಾಜೇಶ್ವರಿನಗರ: ‘ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಶೇ 90ಕ್ಕಿಂತಲೂ ಹೆಚ್ಚು ಅಂಕ ಪಡೆದ ಯಶವಂತಪುರ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ, ಪ್ರತಿಭಾ ಪುರಸ್ಕಾರ ಮತ್ತು ಉಡುಗೊರೆ ನೀಡಲಾಗುವುದು’ ಎಂದು ಶಾಸಕ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಮಾಗಡಿ ರಸ್ತೆಯ ಅಂಜನಾನಗರ ಬಳಿಯ ಶಾಸಕರ ಕಚೇರಿಯಲ್ಲಿ ನಡೆದ 17 ಗ್ರಾಮ ಪಂಚಾಯಿತಿ ಮತ್ತು 11 ವಾರ್ಡ್ ವ್ಯಾಪ್ತಿಯ ಬ್ಲಾಕ್, ವಾರ್ಡ್ ಕಾಂಗ್ರೆಸ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು , ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

‘ಮೇ 15ರಂದು ಹೇರೋಹಳ್ಳಿಯ ಭರತ್ ನಗರದ ಕೆಂಪೇಗೌಡ ಕ್ರೀಡಾಂಗಣದಲ್ಲಿ ಪ್ರತಿಭಾ ಪುರಸ್ಕಾರ, ಬಸವ ಜಯಂತಿ, ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿ ನಡೆಯಲಿದೆ. ಶಿವರಾತ್ರಿ ದೇಶೀಕೇಂದ್ರ ಸ್ವಾಮಿಜಿ, ನಿರ್ಮಲಾನಂದ ಸ್ವಾಮೀಜಿ, ಸಿದ್ದಲಿಂಗ ಸ್ವಾಮೀಜಿ ಭಾಗವಹಿಸುವರು’ ಎಂದು ಹೇಳಿದರು.

‘ಅಂತರರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಿದ 10 ಸಾವಿರ ಹೆಣ್ಣುಮಕ್ಕಳಿಗೆ ಬಹುಮಾನ ನೀಡುವ ಕಾರ್ಯಕ್ರಮವನ್ನು ಮೇ 17ರಂದು ಹಮ್ಮಿಕೊಳ್ಳಲಾಗಿದೆ’ ಎಂದರು.

ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಿಕ್ಕರಾಜು, ಮೈಲಸಂದ್ರ ನಾಗರಾಜು, ರೇವಣ್ಣಸಿದ್ದಯ್ಯ, ಎಚ್.ಶ್ರೀಧರ್, ಕೆ.ಎಸ್.ಪರ್ವೀಜ್, ಕಾಂಗ್ರೆಸ್ ಮುಖಂಡ ಆರ್.ಶಿವಮಾದಯ್ಯ, ಪಾಲಿಕೆ ಮಾಜಿ ಸದಸ್ಯ ಆರ್ಯ ಶ್ರೀನಿವಾಸ್, ಅಮೃತ್ಗೌಡ, ಅಂಜನಾನಗರ ಎಂ.ಗಂಗರಾಜು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-4-1997068157

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.