ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ಭೂಮಿ ಕಾಪಾಡಲು ಸರ್ಕಾರ ಬದ್ಧ: ಯಡಿಯೂರಪ್ಪ

Last Updated 30 ಡಿಸೆಂಬರ್ 2019, 6:13 IST
ಅಕ್ಷರ ಗಾತ್ರ

ಬೆಂಗಳೂರು: ‘ಕರ್ನಾಟಕದ ಒಂದಿಂಚು ಜಾಗಕಬಳಿಸಲು ಯಾರಿಗೂ ಅವಕಾಶ ನೀಡಿಲ್ಲ, ನೀಡುವುದಿಲ್ಲ. ಗಡಿಭಾಗದ ಕನ್ನಡಿಗರು ಆತಂಕ ಪಡಬಾರದು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗಡಿ ವಿಚಾರದಲ್ಲಿ ಶಿವಸೇನೆ ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದೆ. ಇದಕ್ಕೆ ನಾವು ಸರಿಯಾದ ಉತ್ತರ ನೀಡುತ್ತೇವೆ ಎಂದರು.

ರಾಜ್ಯದ ಗಡಿಯಲ್ಲಿ ಶಾಂತಿ ಕಾಪಾಡಲು ಸರ್ಕಾರ ಬದ್ಧವಾಗಿದೆ. ಗಡಿ ನಿಗದಿವಿಚಾರದಲ್ಲಿ ಮಹಾಜನ್ ವರದಿಯೇ ಅಂತಿಮ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದರು.

ಬೆಳಗಾವಿ ಜಿಲ್ಲೆಯಲ್ಲಿರುವ ಯಾರೊಬ್ಬರೂ ನಾಡದ್ರೋಹದ ಕೆಲಸ ಮಾಡಬಾರದು. ಗಡಿ ವಿಚಾರದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ನಮ್ಮ ಸರ್ಕಾರ ಅವಕಾಶ ನೀಡಲ್ಲ. ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಜನರು ಸಹಕರಿಸಬೇಕು ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT