ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Cauvery issue | ಬೆಂಗಳೂರು ಸಂಪೂರ್ಣ ಬಂದ್‌ ಆಗಲೇಬೇಕು: ಬಿ.ಎಸ್‌. ಯಡಿಯೂರಪ್ಪ

Published 25 ಸೆಪ್ಟೆಂಬರ್ 2023, 12:57 IST
Last Updated 25 ಸೆಪ್ಟೆಂಬರ್ 2023, 12:57 IST
ಅಕ್ಷರ ಗಾತ್ರ

ಬೆಂಗಳೂರು: ಕಾವೇರಿ ನೀರಿಗಾಗಿ ಬೆಂಗಳೂರು ಬಂದ್‌ ನಡೆಸುವ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಮಂಗಳವಾರ ಬೆಂಗಳೂರು ಸಂಪೂರ್ಣವಾಗಿ ಬಂದ್‌ ಆಗಲೇಬೇಕು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹೋಟೆಲ್‌, ಅಂಗಡಿ, ಮುಂಗಟ್ಟುಗಳ ಮಾಲೀಕರು ವಹಿವಾಟು ಸ್ಥಗಿತಗೊಳಿಸಿ ಬಂದ್‌ಗೆ ಬೆಂಬಲ ನೀಡಬೇಕು. ಯಾರಾದರೂ ಬಾಗಿಲು ತೆರೆದು ವ್ಯವಹಾರ ನಡೆಸಲು ಪ್ರಯತ್ನಿಸಿದರೆ ಮುಂದಾಗುವ ತೊಂದರೆಗಳಿಗೆ ನೀವೇ ಹೊಣೆಯಾಗುತ್ತೀರಿ’ ಎಂದರು.

ರಾಜ್ಯದ ಕಾಂಗ್ರೆಸ್‌ ನೇತೃತ್ವದ ಸರ್ಕಾರದಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಕಾವೇರಿ ಕಣಿವೆಯ ಜಲಾಶಯಗಳಲ್ಲಿ 59 ಟಿಎಂಸಿ ಅಡಿ ನೀರು ಮಾತ್ರ ಲಭ್ಯವಿದೆ. ಈಗ ರಾಜ್ಯದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ತಮಿಳುನಾಡಿನ ಏಜೆಂಟರಂತೆ ವರ್ತಿಸುವುದನ್ನು ನಿಲ್ಲಿಸಬೇಕು. ಒಂದು ಹನಿ ನೀರು ಕೂಡ ತಮಿಳುನಾಡಿಗೆ ಹರಿಯದಂತೆ ತಡೆಯಬೇಕು ಎಂದು ಆಗ್ರಹಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ಮಧ್ಯ ಪ್ರವೇಶಿಸಬೇಕು ಎಂದು ಆಗ್ರಹಿಸಿ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರು ಪತ್ರ ಬರೆದಿರುವ ಕುರಿತು ಪ್ರಶ್ನಿಸಿದಾಗ, ‘ಪತ್ರ ಬರೆದಿರುವುದು ಗೊತ್ತಿದೆ. ಆ ಬಗ್ಗೆ ಈಗ ಮಾತನಾಡುವುದಿಲ್ಲ’ ಎಂದರು.

ಬಂದ್‌ ಬೆಂಬಲಿಸಿ ಬಿಜೆಪಿ ಶಾಸಕರು ಮತ್ತು ಸಂಸದರು ವಿಧಾನಸೌಧದ ಆವರಣದಲ್ಲಿನ ಮಹಾತ್ಮ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಲಿದ್ದಾರೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT