ಬೆಂಗಳೂರು: ಶ್ರೀಬಸವೇಶ್ವರ ಸೇವಾ ಸಮಿತಿ, ಅಕ್ಕನ ಬಳಗ ಮಹಿಳಾ ಸಮಾಜ ಮತ್ತು ಅಖಿಲ ಭಾರತ ವೀರಶೈವ ಮಹಾಸಭಾದ ಬೆಂಗಳೂರು ನಗರ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ಬಸವ ಜಯಂತಿ, ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರಿಗೆ 'ಬಸವ ಶ್ರೀ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಯಡಿಯೂರಪ್ಪ, 'ಬಸವಣ್ಣ, ನನ್ನ ಬದುಕಿನ ಪ್ರೇರಣ ಶಕ್ತಿ. ಅವರ ಕಾಯಕ, ದಾಸೋಹ, ಸಮ ಸಮಾಜದ ತತ್ವಗಳು ನನ್ನ ಬದುಕನ್ನು ರೂಪಿಸಿವೆ. ಬಸವಣ್ಣನ ಹೆಸರಲ್ಲಿ ಪ್ರಶಸ್ತಿ ನೀಡಿರುವುದು, ಗೌರವದ ಜೊತೆಗೆ, ಜವಾಬ್ದಾರಿಯನ್ನೂ ನೆನಪಿಸಿದೆ’ ಎಂದು ಹೇಳಿದರು.

‘ಐವತ್ತು ವರ್ಷಗಳಿಗೂ ಹೆಚ್ಚಿನ ಅವಧಿಯ ನನ್ನ ಸಾರ್ವಜನಿಕ ಜೀವನದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದೇನೆ. ಜನರ ಸೇವೆಯೇ ನನ್ನ ಧರ್ಮ ಎಂದುಕೊಂಡು ಜೀವಿಸಿದ್ದೇನೆ. ಈ ಪ್ರಶಸ್ತಿ ಇನ್ನೂ ಹೆಚ್ಚಿನ ರೀತಿಯಲ್ಲಿ ಬಡವರ, ಶೋಷಿತರ, ನಿರ್ಲಕ್ಷ್ಯಿತರ ಸೇವೆ ಮಾಡುವಂತೆ ಪ್ರೇರೇಪಿಸುತ್ತಿದೆ’ ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೆ.ವಿ.ವಿ ಸಂಸ್ಥೆ ಅಧ್ಯಕ್ಷ ಬಿ.ಎಸ್. ಪರಮಶಿವಯ್ಯ, ‘ರಾಜ್ಯದಲ್ಲಿ ಈವರೆಗೂ ವೀರಶೈವ–ಲಿಂಗಾಯತ ಸಮುದಾಯದ ಯಾವ ಮುಖ್ಯಮಂತ್ರಿಯೂ ಐದು ವರ್ಷ ಅಧಿಕಾರ ಅವಧಿಯನ್ನು ಪೂರ್ಣಗೊಳಿಸಿಲ್ಲ. ಅದಕ್ಕೆ ವೀರಶೈವ–ಲಿಂಗಾಯತರಲ್ಲಿರುವ ಒಳಪಂಗಡಗಳಲ್ಲಿ ಒಗ್ಗಟ್ಟಿನ ಕೊರತೆಯೇ ಕಾರಣ’ ಎಂದರು.

‘ನಮ್ಮಲ್ಲಿರುವ ಒಳಪಂಗಡಗಳು ಒಗ್ಗಟ್ಟಾದರೆ ರಾಜಕೀಯವಾಗಿ ಅಭಿವೃದ್ಧಿ ಹೊಂದಬಹುದು. ಈ ನಿಟ್ಟಿನಲ್ಲಿ ಒಳಪಂಗಡಗಳನ್ನು ಮರೆತು, ಒಗ್ಗಟ್ಟಿನಿಂದ ಸಂಘಟಿತರಾದರೆ ಸಮುದಾಯವೂ ಬಲವರ್ಧನೆಗೊಳ್ಳುತ್ತದೆ’ ಎಂದು ಅಭಿಪ್ರಾಯಪಟ್ಟರು.

‘ನಮ್ಮ ಸಮುದಾಯದ ಕೆ.ರುದ್ರೇಶ್ ಅವರನ್ನು ಮುಂದಿನ ಚುನಾವಣೆಯಲ್ಲಿ ಯಶವಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿಸುವ ಕುರಿತು ಯಡಿಯೂರಪ್ಪ ಅವರು ಪ್ರಸ್ತಾಪಿಸಿದ್ದಾರೆ. ಅವರಿಗೊಂದು ಅವಕಾಶ ಕೊಡಿ ಎಂದು’ ಮನವಿ ಮಾಡಿದರು.

ತುಮಕೂರಿನ ಸಿದ್ದಗಂಗಾಮಠದ ಶಿವಸಿದ್ದೇಶ್ವರ ಸ್ವಾಮೀಜಿ ಮಾತನಾಡಿದರು. ಅಕ್ಕನ ಬಳಗ ಮಹಿಳಾ ಸಮಾಜದ ಅಧ್ಯಕ್ಷೆ ಪಂಕಜ ಶಿವಾನಂದ ಮತ್ತಿತರರು ಹಾಜರಿದ್ದರು.

ಪ್ರಶಸ್ತಿ ಪ್ರದಾನ:

ಅಕ್ಕನ ಬಳಗ ಮಹಿಳಾ ಸಮಾಜ ಸುಮಂಗಲಿ ಸೇವಾಶ್ರಮದ ಅಧ್ಯಕ್ಷೆ ಸುಶೀಲಮ್ಮ ಅವರಿಗೆ ‘ಅಕ್ಕಮಹಾದೇವಿ ಪ್ರಶಸ್ತಿ’ ಶ್ರೀಬಸವೇಶ್ವರ ಸೇವಾ ಸಮಿತಿ ಡಾ.ದೀಪಕ್ ಶಿವರಾತ್ರಿ ಅವರಿಗೆ ‘ಕಾಯಕ ಯೋಗಿ’ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ.ಮರಿಸ್ವಾಮಿ ಅವರಿಗೆ ‘ಕಾಯಕ ರತ್ನ’ ಪ್ರಶಸ್ತಿ ನೀಡಿಗೌರವಿಸಿತು. ಇದೇ ವೇಳೆ ವಿವಿಧ ಕ್ಷೇತ್ರಗಳ ಒಂಬತ್ತು ಸಾಧಕರಿಗೆ ‘ಅತ್ಯುತ್ತಮ ಸೇವಾ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.