ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಲಹಂಕ: 9 ತಂಡಗಳಿಂದ ಪಥಸಂಚಲನ

Last Updated 23 ಜನವರಿ 2021, 17:09 IST
ಅಕ್ಷರ ಗಾತ್ರ

ಯಲಹಂಕ: ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ಆಶ್ರಯದಲ್ಲಿ ಉಪನಗರದ ಹೊಯ್ಸಳ ಕ್ರೀಡಾಂಗಣದಲ್ಲಿ 71ನೇ ಗಣರಾಜ್ಯೋತ್ಸವ ಸಮಾರಂಭವನ್ನು ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ತಿಳಿಸಿದರು.

‘ಪ್ರತಿವರ್ಷ ಅದ್ಧೂರಿಯಾಗಿ ಗಣರಾಜ್ಯೋತ್ಸವ ಸಮಾರಂಭವನ್ನು ಆಯೋಜಿಸಲಾಗುತ್ತಿತ್ತು. ಆದರೆ ಈ ಬಾರಿ ಕೋವಿಡ್ ನಿಯಮಗಳ ಅನುಸಾರ ಸರಳ ರೀತಿಯಲ್ಲಿ ಆಚರಿಸಲು ನಿರ್ಧರಿಸಲಾಗಿದೆ’ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ಬೆಳಿಗ್ಗೆ 9ಕ್ಕೆ ಧ್ವಜಾರೋಹಣ ನೆರವೇರಿಸಲಾಗುವುದು. ಪೊಲೀಸ್, ಬ್ಯಾಂಡ್, ದೈಹಿಕ ಶಿಕ್ಷಣ ಶಿಕ್ಷಕರ ಹಾಗೂ ಆಯ್ದ ಶಾಲೆಗಳ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 9 ತಂಡಗಳಿಂದ ಪಥಸಂಚಲನ ನಡೆಯಲಿದೆ’ ಎಂದು ಮಾಹಿತಿ ನೀಡಿದರು.

ತಹಶೀಲ್ದಾರ್ ಕೆ.ನರಸಿಂಹಮೂರ್ತಿ, ಕ್ಷೇತ್ರಶಿಕ್ಷಣಾಧಿಕಾರಿ ಕಮಲಾಕರ್, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಕಿಶೋರ್ ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT