ಬುಧವಾರ, ಮೇ 18, 2022
23 °C

‘ಅಂಬೇಡ್ಕರ್, ಜಗಜೀವನರಾಂ ಇಬ್ಬರೂ ಸ್ಮರಣೀಯರು’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಲಹಂಕ: ‘ಅಂಬೇಡ್ಕರ್ ರಚಿಸಿದ ಸಂವಿಧಾನದ ಅಡಿಯಲ್ಲಿ ಪರಿಶಿಷ್ಟರಿಗೆ 10 ವರ್ಷಗಳ ಅವಧಿಗೆ ಸೀಮಿತವಾಗಿದ್ದ ಮೀಸಲಾತಿ 75 ವರ್ಷಗಳಾದರೂ ಮುಂದುವರಿಯಲು ಬಾಬು ಜಗಜೀವನರಾಂ ಪರಿಶ್ರಮ ಕಾರಣ. ಈ ಇಬ್ಬರ ಕೊಡುಗೆಯೂ ಸ್ಮರಣಿಯವಾದುದು’ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅಭಿಪ್ರಾಯಪಟ್ಟರು.

ಸಿಂಗನಾಯಕನಹಳ್ಳಿಯಲ್ಲಿ ಆಯೋಜಿಸಿದ್ದ ಬಾಬು ಜಗಜೀವನರಾಂ ಅವರ 115ನೇ ಜಯಂತ್ಯುತ್ಸವ ಹಾಗೂ ಬೆಂಗಳೂರು ಆದಿಜಾಂಬವ ಮಾದಿಗ ಮಹಾಸಭಾ ಉದ್ಘಾಟಿಸಿ ಅವರು ಮಾತನಾಡಿದರು.

‘ರಾಜ್ಯದಲ್ಲಿ 3,300 ವಸತಿ ನಿಲಯಗಳಲ್ಲಿ ಮತ್ತು ವಸತಿ ಶಾಲೆಗಳಲ್ಲಿ ಪರಿಶಿಷ್ಟ ಜಾತಿಗೆ ಸೇರಿದ 5 ಲಕ್ಷಕ್ಕೂ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಇವರ ಶೈಕ್ಷಣಿಕ ಪ್ರಗತಿಗೆ ಒತ್ತು ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ₹2,500 ವೆಚ್ಚದಲ್ಲಿ 133 ವಸತಿ ಶಾಲೆಗಳಿಗೆ ಚಾಲನೆ ನೀಡಿದೆ’ ಎಂದರು.

ಕಾಂಗ್ರೆಸ್ ಮುಖಂಡ ಕೆ.ಎಚ್.ಮುನಿಯಪ್ಪ, ‘ಕಳೆದ ಬಾರಿ ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಮ್ಮದೇ ಸರ್ಕಾರ ಇದ್ದರೂ ಸದಾಶಿವ ಆಯೋಗದ ವರದಿ ಜಾರಿ ಸಾಧ್ಯವಾಗಲಿಲ್ಲ. ಬಿಜೆಪಿ ಸರ್ಕಾರವೇ ಈ ವರದಿ ಜಾರಿಗೊಳಿಸಿದರೆ ಶ್ಲಾಘಿಸುತ್ತೇವೆ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.