ಸೋಮವಾರ, ಜೂನ್ 27, 2022
27 °C

ಕಡತ ವಿಲೇವಾರಿ ಅಭಿಯಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಲಹಂಕ: ಬೆಂಗಳೂರು ಉತ್ತರ ಹಾಗೂ ಯಲಹಂಕ ತಾಲ್ಲೂಕು ಕಚೇರಿಗಳ ಕಡತ ವಿಲೇವಾರಿ ಅಭಿಯಾನ ಏ.1ರಿಂದ 12ರವರೆಗೆ ನಡೆಯಲಿದೆ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ತಿಳಿಸಿದರು.

ತಾಲ್ಲೂಕು ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ‘ಈ ಎರಡೂ ತಾಲ್ಲೂಕು ಕಚೇರಿಗಳಲ್ಲಿ ಒಂದು ವರ್ಷಕ್ಕಿಂತ ಮೇಲ್ಪಟ್ಟ ಪ್ರಕರಣಗಳು ಬಾಕಿ ಇದ್ದು, ತಡಮಾಡದೆ ಇತ್ಯರ್ಥಪಡಿಸುವಂತೆ ವಿಷಯ ಸೂಚಕರಿಗೆ ಸೂಚನೆ ನೀಡಲಾಗಿದೆ’ ಎಂದರು.

‘ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗೆ ಕಚೇರಿಗಳಿಗೆ ಅಲೆದಾಡುತ್ತಿರುವುದು ಮತ್ತು ಪ್ರಕರಣಗಳನ್ನು ಇತ್ಯರ್ಥಪಡಿಸಲು ವಿಳಂಬವಾಗುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿರುವ ಕಾರಣ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.

ಬೆಳಿಗ್ಗೆ 9.30ರಿಂದ ಸಂಜೆ 6.30ರವರೆಗೆ ಈ ಅಭಿಯಾನ ನಡೆಯಲಿದ್ದು, ಈ ಅವಧಿಯಲ್ಲಿ ಮಧ್ಯಾಹ್ನ 3 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಅತಿಜರೂರು ಸಂದರ್ಭಗಳಲ್ಲಿ ಮಾತ್ರ ಶಿರಸ್ತೇದಾರ್ ಅವರನ್ನು ಭೇಟಿ ಮಾಡಬಹುದಾಗಿದೆ ಎಂದು ವಿಶ್ವನಾಥ್ ಮಾಹಿತಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು