ಶುಕ್ರವಾರ, ಜೂಲೈ 10, 2020
24 °C
ಬಿಬಿಎಂಪಿ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕಾರ

ಯಲಹಂಕ ಮೇಲ್ಸೇತುವೆಗೆ ಸಾವರ್ಕರ್‌ ಹೆಸರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಯಲಹಂಕದ ಡೇರಿ ವೃತ್ತದಲ್ಲಿನ ನೂತನ ಮೇಲ್ಸೇತುವೆಗೆ ‘ವೀರ ಸಾವರ್ಕರ್‌’ ಹೆಸರು ಇಡುವ ಪ್ರಸ್ತಾವವನ್ನು ಬಿಬಿಎಂಪಿಯು ಮಂಗಳವಾರ ಸರ್ವಾನುಮತದಿಂದ ಅಂಗೀಕರಿಸಿತು. ನಗರಾಭಿವೃದ್ಧಿ ಇಲಾಖೆಯು ಪಾಲಿಕೆಯ ಪ್ರಸ್ತಾವನೆಯನ್ನು ಪರಿಶೀಲಿಸಿ ಅಂತಿಮ ಆದೇಶ ಹೊರಡಿಸಬೇಕಿದೆ.

ಬಿಬಿಎಂಪಿಯಲ್ಲಿ ಫೆಬ್ರುವರಿಯಲ್ಲಿ ನಡೆದ ಕೌನ್ಸಿಲ್ ಸಭೆಯಲ್ಲಿ ಯಲಹಂಕದ ಮೇ. ಸಂದೀಪ್ ಉನ್ನಿಕೃಷ್ಣನ್ ರಸ್ತೆಯ ಡೇರಿ ವೃತ್ತದ ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರಿಡುವ ಪ್ರಸ್ತಾವ ಮಂಡಿಸಲಾಗಿತ್ತು. ಈ ಕುರಿತು ಸಾರ್ವಜನಿಕರಿಂದ ಆಕ್ಷೇಪಣೆ ಆಹ್ವಾನಿಸಿ, 30 ದಿನ ಕಾಲಾವಕಾಶ ನೀಡಲಾಗಿತ್ತು. ಈ ವೇಳೆ, ಎರಡೇ ಆಕ್ಷೇಪಣೆಗಳು ಬಂದಿದ್ದವು. ಒಬ್ಬರು ಸಾವರ್ಕರ್‌ ಹೆಸರು ಇಡಬೇಕು ಎಂದು ಹೇಳಿದ್ದರೆ, ಮತ್ತೊಬ್ಬರು ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಆಕ್ಷೇಪಣೆಗೆ ಸರಿಯಾದ ಆಧಾರ ಇಲ್ಲದ ಹಿನ್ನೆಲೆಯಲ್ಲಿ, ವೀರ ಸಾವರ್ಕರ್‌  ಹೆಸರಿಡಲು ಆಯುಕ್ತರು ಶಿಫಾರಸು ಮಾಡಿದ್ದರು. 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು