ಯಲಹಂಕ: ಬ್ಯಾಟರಾಯನಪುರ ಕ್ಷೇತ್ರದ ದೇವಿನಗರದಲ್ಲಿ ಕಣ್ಣೂರಮ್ಮ ದೇವಿ ಹಾಗೂ ಮುನೇಶ್ವರಸ್ವಾಮಿ ದೇವಾಲಯಗಳ ಟ್ರಸ್ಟ್ ಮತ್ತು ಕಣ್ಣೂರಮ್ಮ ಸೇವಾ ಸಮಿತಿ ವತಿಯಿಂದ ದೇವಿಯ ಪ್ರತಿಷ್ಠಾಪನಾ ಮಹೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯ ಕ್ರಮಗಳು ವಿಜೃಂಭಣೆಯಿಂದ ನೆರವೇರಿದವು.

ಮಹೋತ್ಸವದ ಪ್ರಯುಕ್ತ ದೇವಿನಗರದ ಮಹಾದ್ವಾರವನ್ನು ಉದ್ಘಾಟಿಸಲಾಯಿತು. ಇದೇ ಸಂದರ್ಭದಲ್ಲಿ ಮುನೇಶ್ವರಸ್ವಾಮಿಯ 12ನೇ ವರ್ಷದ ಪೂರ್ಣ ಕುಂಭಾಭಿಷೇಕ, ಕಣ್ಣೂರಮ್ಮ ದೇವಿಯ ಶಿಲಾಮೂರ್ತಿ ಪ್ರತಿಷ್ಠಾಪನೆ, ನೂತನ ವಿಮಾನ ಗೋಪುರ ಹಾಗೂ ಮೂಲವಿಗ್ರಹಕ್ಕೆ ಕಳಶಾಭಿಷೇಕ ನೆರವೇರಿಸಲಾಯಿತು. ಸಾಮೂಹಿಕ ಲಲಿತಾಸಹಸ್ರನಾಮ ಪಾರಾಯಣ, ಕುಂಕುಮಾರ್ಚನೆ ಮತ್ತು ಅನ್ನದಾನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಕಂದಾಯ ಸಚಿವ ಕೃಷ್ಣ ಬೈರೇಗೌಡ, ಆದಿಶಕ್ತಿ ಮಹಾಸಂಸ್ಥಾನಮಠದ ಪೀಠಾಧಿಪತಿ ಪ್ರಣವಾನಂದಪುರಿಸ್ವಾಮೀಜಿ, ವಿಧಾನಪರಿಷತ್ ಮಾಜಿ ಸದಸ್ಯ ಪಿ.ಆರ್.ರಮೇಶ್, ಬಿಜೆಪಿ ಮುಖಂಡ ಎ.ರವಿ, ಟ್ರಸ್ಟ್ನ ಅಧ್ಯಕ್ಷ ಸಿ.ರಾಮಕೃಷ್ಣಪ್ಪ, ಉಪಾಧ್ಯಕ್ಷ ಎಂ.ಮುನಿರಾಜು, ಕಾರ್ಯದರ್ಶಿ ಎಂ.ನಾರಾಯಣಸ್ವಾಮಿ ಹಾಗೂ ಗ್ರಾಮದ ಮುಖಂಡರಾದ ಸಿ.ಶಿವಣ್ಣ, ಸಿ.ವೆಂಕಟ ಸ್ವಾಮಿ, ಶಾಮಣ್ಣ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-4-615256272

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.