ಭಾನುವಾರ, ಜನವರಿ 17, 2021
22 °C
ಯಲಹಂಕ: ಕಾಯಂ ಹಕ್ಕುಪತ್ರ, ಪಿಂಚಣಿ ಆದೇಶ ಪತ್ರ ವಿತರಣೆ

‘ಬಡವರಿಗಾಗಿ ವರ್ಷದೊಳಗೆ 10 ಸಾವಿರ ಮನೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಲಹಂಕ: ಕ್ಷೇತ್ರ ವ್ಯಾಪ್ತಿಯಲ್ಲಿ ಬಡವರಿಗಾಗಿ ವರ್ಷದೊಳಗೆ 10 ಸಾವಿರ ಮನೆಗಳನ್ನು ವಿತರಿಸುವ ಗುರಿ ಇದ್ದು, ಈಗಾಗಲೆ 4 ಕಡೆ ಭೂಮಿಪೂಜೆ ನೆರವೇರಿಸಿ ಕಟ್ಟಡಗಳ ನಿರ್ಮಾಣ ಕಾಮಗಾರಿ ಆರಂಭಿಸಲಾಗಿದೆ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದರು.

ತಾಲ್ಲೂಕು ಕಚೇರಿಯಲ್ಲಿ ಕಂದಾಯ ಇಲಾಖೆ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ 94ಸಿಸಿ ಅಡಿಯಲ್ಲಿ ಕಾಯಂ ಹಕ್ಕುಪತ್ರ ಹಾಗೂ ವಿವಿಧ ವರ್ಗಗಳ ಜನರಿಗೆ ಪಿಂಚಣಿ ಆದೇಶ ಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು.

‘ಯಲಹಂಕ ಮತ್ತು ಹೆಸರಘಟ್ಟ ವ್ಯಾಪ್ತಿಯಲ್ಲಿ ಈ ಹಿಂದೆಯೇ 94ಸಿಸಿ ಅಡಿಯಲ್ಲಿ 2 ಸಾವಿರ ಹಕ್ಕುಪತ್ರಗಳನ್ನು ನೀಡಲಾಗಿತ್ತು. ಈಗ ಇನ್ನಷ್ಟು ಕುಟುಂಬಗಳಿಗೆ ಹಕ್ಕುಪತ್ರ ನೀಡಿದ್ದರಿಂದ, ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡು ಯಾವುದೇ ದಾಖಲೆಗಳಿಲ್ಲದೆ ಜೀವನ ನಡೆಸುತ್ತಿದ್ದ ಬಡಕುಟುಂಬಗಳ ಆತಂಕ ದೂರವಾಗಿದೆ. ಈ ಜಾಗದ ಮಾಲೀಕರಿಗೆ ಶೀಘ್ರವೇ ಪಂಚಾಯ್ತಿಗಳಲ್ಲಿ ಖಾತಾ ಮಾಡಿಕೊಡಲಾಗುತ್ತದೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು