ಬೆಂಗಳೂರು: ಪ್ರೀತಿಸುತ್ತಿದ್ದ ಯುವತಿ ದೂರವಾದಳು ಎಂಬ ಕಾರಣಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಠಾಣಾ ವ್ಯಾಪ್ತಿಯ ಅಟ್ಟೂರು ಲೇಔಟ್ ನಿವಾಸಿ, ಬಿ.ಕಾಂ ಪದವೀಧರ ಅಭಿಷೇಕ (23) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಖಾಸಗಿ ಕಂಪನಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಅಭಿಷೇಕ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆದರೆ, ಆಕೆಯ ಮನೆಯವರು ಇದಕ್ಕೆ ವಿರೋಧ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದರು. ನಂತರ ಪೊಲೀಸರು ಆತನನ್ನು ಠಾಣೆಗೆ ಕರೆಯಿಸಿ, ಬುದ್ಧಿಮಾತು ಹೇಳಿ, ಎಚ್ಚರಿಕೆ ನೀಡಿ ಕಳುಹಿಸಿದ್ದರು.

ನಂತರ ಯುವತಿ ಆತನಿಂದ ಅಂತರ ಕಾಯ್ದುಕೊಂಡಿದ್ದಳು. ಆದರೂ ಅಭಿಷೇಕ ಆಕೆಯೊಂದಿಗೆ ಮಾತನಾಡುವ ಸಲುವಾಗಿ ಕರೆ ಮಾಡಲು ಪ್ರಯತ್ನಿಸುತ್ತಿದ್ದ. ಯುವತಿ ಮಾತನಾಡಲು ನಿರಾಕರಿಸಿದ್ದರಿಂದ ಬೇಸರಗೊಂಡಿದ್ದ. ಏಪ್ರಿಲ್ 9ರಂದು ಯುವತಿಗೆ ವಿಡಿಯೊ ಕರೆ ಮಾಡಿ, ತಾನು ಸಾಯುತ್ತಿರುವುದಾಗಿ ತಿಳಿಸಿದ್ದ. ನಂತರ ಮರಣಪತ್ರ ಸಹ ಬರೆದಿಟ್ಟು, ಮನೆಯ ಕಿಟಕಿಯ ಗ್ರಿಲ್ಗೆ ವೈರ್ನಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದರು.

ಯುವಕನ ಸಾವಿಗೆ ಯುವತಿಯೇ ಕಾರಣ ಎಂದು ಕುಟುಂಬಸ್ಥರು ದೂರು ನೀಡಿದ್ದಾರೆ. ಇಬ್ಬರ ನಡುವಿನ ಮೊಬೈಲ್ ಸಂದೇಶ ಹಾಗೂ ಕರೆಗಳ ವಿವರ ಸಂಗ್ರಹಿಸಲು ಪೊಲೀಸರು ಮುಂದಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.