ಯಲಹಂಕ: ನೈರುತ್ಯ ರೈಲ್ವೆ ನಿರ್ಮಿಸಲು ಉದ್ದೇಶಿಸಿರುವ ರಾಜಾನುಕುಂಟೆ-ಬೆಟ್ಟಹಲಸೂರು ಹೊಸ ರೈಲು ಮಾರ್ಗವನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರುಸೇನೆಯ ನೇತೃತ್ವದಲ್ಲಿ ಬೆಟ್ಟಹಲಸೂರು ಸಮೀಪದ ಜೋಮಲಕುಂಟೆ ಬಳಿ ರೈತರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಯೋಜನೆ ಅವೈಜ್ಞಾನಿಕವಾಗಿದ್ದು, ಇದರಿಂದ ಪರಿಸರ ಹಾನಿಯ ಜೊತೆಗೆ ಸಾವಿರಾರು ಸಣ್ಣ ಮತ್ತು ಅತಿಸಣ್ಣ ರೈತರ ಬದುಕು ಸಂಕಷ್ಟಕ್ಕೆ ಸಿಲುಕಲಿದೆ. ಯೋಜನೆಯನ್ನು ತಕ್ಷಣ ಕೈಬಿಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

‘ರಾಜಾನುಕುಂಟೆಯಿಂದ ಬೆಟ್ಟಹಲಸೂರುವರೆಗೆ 6.14 ಕಿ.ಮೀ ಉದ್ದದ ಹೊಸ ರೈಲು ಮಾರ್ಗವು ಸಿಂಗನಾಯಕನಹಳ್ಳಿಯ ಅಮಾನಿ ಕೆರೆ, ನಾಗದಾಸನಹಳ್ಳಿ ಮತ್ತು ಹೊನ್ನೇನಹಳ್ಳಿ ಕೆರೆಗಳೂ ಸೇರಿದಂತೆ ಬೆಟ್ಟಹಲಸೂರು ಗ್ರಾಮದ ಸರ್ವೆ ನಂ. 259ರಲ್ಲಿ ಉದ್ಯಾನಕ್ಕೆ ಮೀಸಲಿಟ್ಟಿರುವ ಜಮೀನಿನ ಮೂಲಕ ಹಾದು ಹೋಗಲಿದೆ. ಇದರಿಂದ 200 ವರ್ಷಗಳಿಗೂ ಹಳೆಯ ಹಲವಾರು ಮರಗಳನ್ನು ತೆರವುಗೊಳಿಸುವ ಪರಿಸ್ಥಿತಿ ನಿ ರ್ಮಾಣವಾಗಲಿದೆ. ಈ ಯೋಜನೆಯಿಂದ ಪರಿಸರ ಸಮತೋಲನಕ್ಕೆ ಧಕ್ಕೆಯಾಗುವುದರ ಜೊತೆಗೆ ಕೃಷಿ ಭೂಮಿಯೂ ನಾಶವಾಗಲಿದೆ. ಇದರಿಂದ ರೈತರು, ಪ್ರಾಣಿ, ಪಕ್ಷಿ, ವೃಕ್ಷ ಸಂಪತ್ತಿಗೆ ಹಾನಿಯಾಗಲಿದೆ ಎಂದು ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ಬಿ.ಜಿ. ನಂಜುಂಡಪ್ಪ ದೂರಿದರು.

ಬೆಟ್ಟಹಲಸೂರು, ತಿಮ್ಮಸಂದ್ರ ಹಾಗೂ ರಾಜಾನುಕುಂಟೆ ಗ್ರಾಮಗಳ ರೈತರು ಮತ್ತು ಗ್ರಾಮಸ್ಥರು ಈ ಯೋಜನೆಗೆ ಆರಂಭದಿಂದಲೂ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ರೈಲ್ವೆ ಇಲಾಖೆ, ಕಂದಾಯ ಇಲಾಖೆ ಹಾಗೂ ಸಂಬಂಧಪಟ್ಟ ಸಚಿವರಿಗೆ ಹಲವುಬಾರಿ ಮನವಿ ಸಲ್ಲಿಸಿದ್ದಾರೆ. ಈ ಕುರಿತು ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿಯೂ ವಿರೋಧ ವ್ಯಕ್ತಪಡಿಸಲಾಗಿತ್ತು. ಅದರ ನಡಾವಳಿಯನ್ನು ಸಂಬಂಧಪಟ್ಟ ಇಲಾಖೆಗೆ ರವಾನಿಸಲಾಗಿದೆ ಎಂದರು.

ಈ ಯೋಜನೆಯನ್ನು ಕೈಬಿಟ್ಟು, 2013ರಲ್ಲಿ ಪ್ರಸ್ತಾಪಿಸಲಾಗಿದ್ದ ಗೌರಿಬಿದನೂರು-ಚಿಕ್ಕಬಳ್ಳಾಪುರ ಹಾಗೂ ಪುಟ್ಟಪರ್ತಿ-ಚಿಕ್ಕಬಳ್ಳಾಪುರ ರೈಲು ಮಾರ್ಗ ಯೋಜನೆಗಳನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಒಂದುವೇಳೆ ರೈಲ್ವೆ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ರೈತರ ಮನವಿಗೆ ಸ್ಪಂದಿಸದೆ ಒತ್ತಾಯವಾಗಿ ಯೋಜನೆ ಜಾರಿಗೊಳಿಸಲು ಮುಂದಾದರೆ, ಮುಂದಿನ ದಿನಗಳಲ್ಲಿ ಈ ಭಾಗದ ಎಲ್ಲ ರೈತರೂ ಒಗ್ಗೂಡುವ ಮೂಲಕ ಉಗ್ರಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ರೈತ ಮುಖಂಡರಾದ ಬಿ.ಎಂ. ಶ್ರೀನಿವಾಸಮೂರ್ತಿ, ಟಿ.ಪಿ. ಪ್ರಕಾಶ್, ಜೀರಿಗೆ ಬಾಬು, ಅಂಬರೀಶ್, ಸನತ್ ಕುಮಾರ್, ಶ್ರೇಯಸ್, ಬಿ.ಎನ್. ನಾಗರಾಜು, ಕಾಟಪ್ಪ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-18-210039488

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.