ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಲಹಂಕದ ರಿಯಲ್ ಎಸ್ಟೇಟ್ ಉದ್ಯಮಿ ಕೃಷ್ಣ ಯಾದವ್ ಹತ್ಯೆ: ಕಾರಿನಲ್ಲಿ ಮೃತದೇಹ

‘ಆಂಧ್ರಪ್ರದೇಶದ ಕೃಷ್ಣ, 20 ವರ್ಷಗಳಿಂದ ಮಾರುತಿನಗರದಲ್ಲಿ ನೆಲೆಸಿದ್ದರು.
Published 12 ಮಾರ್ಚ್ 2024, 15:52 IST
Last Updated 12 ಮಾರ್ಚ್ 2024, 15:52 IST
ಅಕ್ಷರ ಗಾತ್ರ

ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಕೃಷ್ಣ ಯಾದವ್ (55) ಎಂಬುವವರನ್ನು ಹತ್ಯೆ ಮಾಡಿ ಕಾರಿನಲ್ಲಿ ಮೃತದೇಹ ಇರಿಸಿ ಆರೋಪಿಗಳು ಪರಾರಿಯಾಗಿದ್ದು, ಈ ಬಗ್ಗೆ ಯಲಹಂಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಆಂಧ್ರಪ್ರದೇಶದ ಕೃಷ್ಣ, 20 ವರ್ಷಗಳಿಂದ ಮಾರುತಿನಗರದಲ್ಲಿ ನೆಲೆಸಿದ್ದರು. ಬಾಗಲೂರು ವೃತ್ತ ಬಳಿ ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಅವರ ಮೃತದೇಹ ಮಂಗಳವಾರ ಪತ್ತೆಯಾಗಿದೆ. ಮಗ ನೀಡಿರುವ ದೂರು ಆಧರಿಸಿ ಕೊಲೆ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

ಹರಿತವಾದ ಆಯುಧದಿಂದ ಇರಿದು ಕೊಲೆ

‘ಕೆಲಸವಿರುವುದಾಗಿ ಹೇಳಿ ಸೋಮವಾರ ಮನೆಯಿಂದ ಹೊರಗೆ ಬಂದಿದ್ದ ಕೃಷ್ಣ, ರಾತ್ರಿ ವಾಪಸು ಹೋಗಿರಲಿಲ್ಲ. ಬೆಳಿಗ್ಗೆ ಬರಬಹುದೆಂದು ಮನೆಯವರು ಸುಮ್ಮನಾಗಿದ್ದರು. ಆದರೆ, ಬೆಳಿಗ್ಗೆ ಕೃಷ್ಣ ಮೃತದೇಹ ಸಿಕ್ಕಿದೆ’ ಎಂದು ಪೊಲೀಸರು ತಿಳಿಸಿದರು.

‘ಕೃಷ್ಣ ಅವರು ತಮ್ಮ ಕಾರಿನಲ್ಲಿ ಇಬ್ಬರು ವ್ಯಕ್ತಿಗಳ ಜೊತೆ ಹೊರಟಿದ್ದರೆಂದು ಗೊತ್ತಾಗಿದೆ. ಅದೇ ವ್ಯಕ್ತಿಗಳು, ಕೃಷ್ಣ ಅವರನ್ನು ಹರಿತವಾದ ಆಯುಧದಿಂದ ಇರಿದು ಕೊಂದಿದ್ದಾರೆ. ನಂತರ, ಮೃತದೇಹ ಸಮೇತ ಕಾರನ್ನು ಬಾಗಲೂರು ವೃತ್ತದ ಬಳಿ ನಿಲ್ಲಿಸಿ ಪರಾರಿಯಾಗಿರುವ ಮಾಹಿತಿ ಇದೆ. ಮೃತದೇಹದ ಮೇಲಿರುವ ಗಾಯದ ಗುರುತಿನಿಂದ ಇದೊಂದು ಕೊಲೆ ಎಂಬುದು ಗೊತ್ತಾಯಿತು’ ಎಂದು ಹೇಳಿದರು.

‘ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಗುರುತಿಸಿಕೊಂಡಿದ್ದ ಕೃಷ್ಣ, ಹಲವು ನಿವೇಶನಗಳನ್ನು ಅಭಿವೃದ್ಧಿಪಡಿಸಿದ್ದರು. ಕೆಲವರ ಜೊತೆ ವೈಷಮ್ಯ ಹೊಂದಿದ್ದರೆಂಬುದು ತನಿಖೆಯಿಂದ ಗೊತ್ತಾಗಿದೆ. ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT