ಮಂಗಳವಾರ, ಏಪ್ರಿಲ್ 7, 2020
19 °C

ಸರಣಿ ಅಪಘಾತ; ಆರಕ್ಕೂ ಹೆಚ್ಚು ಮಂದಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಭಾನುವಾರ ರಾತ್ರಿ ಸರಣಿ ಅಪಘಾತ ಸಂಭವಿಸಿದ್ದು, ಆರಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

ವೆಂಕಟಾಲ ಮೇಲ್ಸೇತುವೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಸ್ಥಳೀಯರೇ ಗಾಯಾಳುಗಳನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳ ಹೆಸರು ಗೊತ್ತಾಗಿಲ್ಲ.

‘ನಗರದಿಂದ ವಿಮಾನ ನಿಲ್ದಾಣದತ್ತ ಹೊರಟಿದ್ದ ಕಾರೊಂದು ಮೇಲ್ಸೇತುವೆಯಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು, ಎದುರಿಗೆ ಬರುತ್ತಿದ್ದ ಮತ್ತೊಂದು ಕಾರಿಗೆ ಗುದ್ದಿತ್ತು. ಆ ಕಾರಿಗೂ ಹಿಂದೆಯೇ ಬರುತ್ತಿದ್ದ ಇನ್ನೊಂದು ಕಾರು ಗುದ್ದಿತ್ತು. ಮೂರು ಕಾರುಗಳು ಜಖಂಗೊಂಡವು’ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದರು.

‘ಮೂರು ಕಾರಿನಲ್ಲಿದ್ದವರಿಗೆ ಗಾಯವಾಗಿದೆ. ಅಪಘಾತದಿಂದಾಗಿ ಕಾರುಗಳ ಅವಶೇಷಗಳು ರಸ್ತೆಯಲ್ಲೆಲ್ಲ ಬಿದ್ದಿದ್ದವು. ಇತರೆ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿ ದಟ್ಟಣೆ ಉಂಟಾಯಿತು’ ಎಂದು ವಿವರಿಸಿದರು. 

ಯಲಹಂಕ ಸಂಚಾರ ಪೊಲೀಸರು, ‘ಘಟನಾ ಸ್ಥಳವನ್ನು ತೆರವು ಮಾಡಲಾಗಿದೆ. ಠಾಣೆ ಸಿಬ್ಬಂದಿ ಆಸ್ಪತ್ರೆಗೆ ಹೋಗಿ ಗಾಯಾಳುಗಳ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು