ಮಂಗಳವಾರ, ಜೂನ್ 28, 2022
21 °C

ಆಹಾರದ ಕಿಟ್ ವಿತರಣೆ, ಲಸಿಕೆ ಅಭಿಯಾನಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಲಹಂಕ: ‘ಕೊರೊನಾದಿಂದ ಬಡವರು ಮತ್ತು ರೈತರು ತಮ್ಮ ಬಳಿಯಿದ್ದ ಅಲ್ಪಸ್ವಲ್ಪ ಆದಾಯವನ್ನು ಕಳೆದುಕೊಂಡು ಹೊಟ್ಟೆಪಾಡಿಗಾಗಿ ಪರದಾಡುತ್ತಿರುವ ಈ ಸಂದರ್ಭದಲ್ಲಿ ಕೆಂದ್ರ ಸರ್ಕಾರ, ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಸಿರುವುದರಿಂದ ಅವರು ಮತ್ತಷ್ಟು ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಗಿದೆ’ ಎಂದು ಶಾಸಕ ಕೃಷ್ಣ ಬೈರೇಗೌಡ ಆರೋಪಿಸಿದರು.

ಯಲಹಂಕ ಕ್ಷೇತ್ರದ ಕಾಂಗ್ರೆಸ್ ಮುಖಂಡರ ವತಿಯಿಂದ ಹಳೇನಗರ ಮತ್ತು ಉಪನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಡವರಿಗೆ ಆಹಾರದ ಕಿಟ್ ವಿತರಿಸಿ ಅವರು ಮಾತನಾಡಿದರು. 

‘ಬಡವರಿಂದ ತೆರಿಗೆ ವಸೂಲಿ ಮಾಡುತ್ತಿರುವ ಕೇಂದ್ರ ಸರ್ಕಾರ, ಪ್ರತಿ ಗಂಟೆಗೆ ₹100 ಕೋಟಿ ಸಂಪಾದಿಸುತ್ತಿರುವ ಅಂಬಾನಿ, ಅದಾನಿಯಂತಹ ಶ್ರೀಮಂತರ ಮೇಲೆ ತೆರಿಗೆ ವಿಧಿಸದಿರುವುದು ದುರದೃಷ್ಟಕರ. ಇದು ದೇಶದ ಭವಿಷ್ಯಕ್ಕೆ ಒಳ್ಳೆಯದಲ್ಲ’ ಎಂದರು.

‘ಕಾಂಗ್ರೆಸ್ ಮುಖಂಡರು ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ತಮ್ಮ ಶಕ್ತಿಗನುಸಾರವಾಗಿ ಸಂಕಷ್ಟದಲ್ಲಿರುವ ಬಡವರಿಗೆ ಸಹಾಯಮಾಡಬೇಕೆಂಬ ಎಐಸಿಸಿ ಮತ್ತು ಕೆಪಿಸಿಸಿ ನಾಯಕರು ಸೂಚಿಸಿದ್ದಾರೆ. ಇದರ ಭಾಗವಾಗಿ ಸೋಮವಾರ ಸುಮಾರು 1000 ಆಹಾರದ ಕಿಟ್‌ಗಳನ್ನು ವಿತರಿಸಲಾಗಿದೆ. ಅಲ್ಲದೆ ಯುವ ಕಾಂಗ್ರೆಸ್ ವತಿಯಿಂದ ಮನೆಮನೆಗೆ ತರಳಿ, ಲಸಿಕೆ ಹಾಕಿಸಿಕೊಳ್ಳಲು ಜನರಿಗೆ ಅರಿವು ಮೂಡಿಸುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು