ಬೆಂಗಳೂರು: ರಾಜ್ಯದ ವಿವಿಧೆಡೆ ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಐದು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಮಂಗಳವಾರವೂ ಇದೇ ಸ್ಥಿತಿ ಮುಂದುವರಿಯಲಿದೆ ಎಂದು ಇಲಾಖೆ ಹೇಳಿದೆ.