ಬೆಂಗಳೂರು: ಯಶವಂತಪುರ ರೈಲು ನಿಲ್ದಾಣದ ನವೀಕರಣ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಮುಕುಲ್ ಸರನ್ ಮಾಥುರ್ ತಿಳಿಸಿದರು.

ನವೀಕರಣ ಕಾಮಗಾರಿಯನ್ನು ಅವರು ಪರಿಶೀಲಿಸಿ ಮಾತನಾಡಿ, ‘₹367 ಕೋಟಿ ವೆಚ್ಚದಲ್ಲಿ ನವೀಕರಣಗೊಳ್ಳುತ್ತಿರುವ ಯಶವಂತಪುರ ರೈಲು ನಿಲ್ದಾಣವು ಕಾಮಗಾರಿ ಪೂರ್ಣಗೊಂಡಾಗ ಪ್ರಯಾಣಿಕರಿಗೆ ವಿಶ್ವ ದರ್ಜೆಯ ಸೌಲಭ್ಯಗಳು ದೊರೆಯಲಿವೆ’ ಎಂದು ತಿಳಿಸಿದರು.

ಕೆಎಸ್ಆರ್ ಬೆಂಗಳೂರು ಮತ್ತು ತುಮಕೂರು ನಡುವೆ ವಿಂಡೋ-ಟ್ರೇಲಿಂಗ್ ತಪಾಸಣೆ ನಡೆಸಿದರು. ವಿವಿಧ ಮೂಲಸೌಕರ್ಯ ಕಾರ್ಯಗಳನ್ನು ಪರಿಶೀಲಿಸಿದರು ಮತ್ತು ಈ ವಿಭಾಗದ ಪ್ರಮುಖ ನಿಲ್ದಾಣಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ ಪ್ರಯಾಣಿಕರ ಸೌಲಭ್ಯಗಳ ಪರಿಶೀಲನೆ ನಡೆಸಿದರು.

ನಿಡವಂದ ನಿಲ್ದಾಣದಲ್ಲಿ ನಡೆಯುತ್ತಿರುವ ಮೇಲ್ದರ್ಜೆ ಕಾಮಗಾರಿಗಳು ಮತ್ತು ಸರಕು ಸಾಗಣೆ ಕೇಂದ್ರದ ಸರಕು ಶೆಡ್ ಅಭಿವೃದ್ಧಿ ಕಾರ್ಯವನ್ನು ಪರಿಶೀಲಿಸಿದರು. ಅಮೃತ್ ಭಾರತ್ ನಿಲ್ದಾಣ ಯೋಜನೆ (ಎಬಿಎಸ್ಎಸ್) ಅಡಿಯಲ್ಲಿ ₹88 ಕೋಟಿಯಲ್ಲಿ ಅಭಿವೃದ್ಧಿಗೊಳ್ಳಲಿರುವ ತುಮಕೂರು ನಿಲ್ದಾಣಕ್ಕೆ ಭೇಟಿ ನೀಡಿದರು.

ನೈರುತ್ಯ ರೈಲ್ವೆ ಮುಖ್ಯ ಆಡಳಿತಾಧಿಕಾರಿ (ನಿರ್ಮಾಣ) ಅಜಯ್ ಶರ್ಮಾ, ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶುತೋಷ್ ಕುಮಾರ್ ಸಿಂಗ್, ಹೆಚ್ಚುವರಿ ರೈಲ್ವೆ ವ್ಯವಸ್ಥಾಪಕ ಪರಿಕ್ಷಿತ್ ಮೋಹನ್ಪುರಿಯಾ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.