ಶನಿವಾರ, ಆಗಸ್ಟ್ 13, 2022
26 °C

ಯೋಗ ದಿನ: ಮನೆಯಲ್ಲೇ ಆಚರಣೆಗೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್ ಕಾರಣ ಈ ಬಾರಿ ಕೂಡ ಅಂತರರಾಷ್ಟ್ರೀಯ ಯೋಗ ದಿನವನ್ನು ಆನ್‌ಲೈನ್ ವೇದಿಕೆಯ ಮೂಲಕ ಮನೆಯಲ್ಲಿಯೇ ಆಚರಿಸಬೇಕು ಎಂದು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ಆಯುಷ್ ಇಲಾಖೆ ಸೂಚಿಸಿದೆ.

ಇದೇ 21ಕ್ಕೆ 7ನೇ ಅಂತರರಾಷ್ಟ್ರೀಯ ಯೋಗ ದಿನ ನಡೆಯಲಿದೆ. ‘ಮನೆಯಲ್ಲೇ ಇದ್ದು, ಯೋಗವನ್ನು ಆಚರಿಸಿ’ ಎನ್ನುವುದು ಈ ಬಾರಿಯ ಘೋಷವಾಕ್ಯ.

‘ಯೋಗ ದಿನದಂದು ಬೆಳಿಗ್ಗೆ 7 ಗಂಟೆಯಿಂದ ಯೋಗಾಭ್ಯಾಸ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರು ಇಲಾಖೆಯ ಜಾಲತಾಣ ಅಥವಾ ಯೋಗವನ್ನು ಪ್ರೋತ್ಸಾ ಹಿ ಸುವ ಸಂಘ ಸಂಸ್ಥೆಗಳ ಜಾಲತಾಣಗಳ ಮೂಲಕ ತರಬೇತಿ ಪಡೆದುಕೊಳ್ಳಬಹುದು. ಯೋಗಾಸನಗಳಿಂದ ಮಾನಸಿಕ ಮತ್ತು ದೈಹಿಕ ಸದೃಢತೆಯನ್ನು ಹೆಚ್ಚಿಸಿಕೊಳ್ಳಲು ಸಾಧ್ಯ’ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ. ಮಹಮ್ಮದ್ ರಫಿ ಎಚ್. ಹಕೀಮ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು