ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೋದಿ ಜನ್ಮದಿನ: 5 ಲಕ್ಷ ಜನರಿಂದ ಯೋಗಾಥಾನ್

Last Updated 2 ಸೆಪ್ಟೆಂಬರ್ 2022, 21:18 IST
ಅಕ್ಷರ ಗಾತ್ರ

ಬೆಂಗಳೂರು: ರೋಗ ಮುಕ್ತ ಕರ್ನಾಟಕ ಹಾಗೂ ಪ್ರಧಾನಿ ಮೋದಿ ಅವರ ಜನ್ಮದಿನದ ಪ್ರಯುಕ್ತ ಸೆ. 17ರಂದು ಯೋಗಾಥಾನ್‌ ಹಮ್ಮಿಕೊಳ್ಳಲಾಗಿದ್ದು, ಏಕಕಾಲದಲ್ಲಿ ಐದು ಲಕ್ಷ ಜನರು ಭಾಗವಹಿಸುವರು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಹೇಳಿದರು.

ರಾಜ್ಯದ ಜಿಲ್ಲಾಧಿಕಾರಿಗಳು, ಸಿಇಒಗಳ ಜತೆ ಶುಕ್ರವಾರ ವಿಡಿಯೊ ಸಂವಾದ ನಡೆಸಿದ ಅವರು, ಸೆ.17ರಂದು ನಡೆಯಲಿರುವ ಯೋಗಾಥಾನ್ ಕಾರ್ಯ ಕ್ರಮದ ಪೂರ್ವ ಸಿದ್ದತೆ ಬಗ್ಗೆ ಮಾಹಿತಿ ಪಡೆದುಕೊಂಡರು. ಯೋಗಾಥಾನ್‌ ಗಿನ್ನೆಸ್ ದಾಖಲೆ ನಿರೀಕ್ಷೆ ಇದ್ದು, ಸಿದ್ದತೆ ಮಾಡಿಕೊಳ್ಳುವಂತೆ ಸೂಚಿಸಿದರು.

ಸ್ವಾಮಿ ವಿವೇಕಾನಂದ ಯುವ ಸ್ವಸಹಾಯ ಸಂಘಗಳನ್ನು ಪ್ರತಿ ಗ್ರಾಮ ಪಂಚಾಯತಿಯಲ್ಲೂ ರಚಿಸಬೇಕು. ಸಂಘ ನೋಂದಣಿಯಾದ ತಕ್ಷಣ ₹ 10 ಸಾವಿರ ಬಿಡುಗಡೆ ಮಾಡಲಾಗುವುದು. ನರೇಗಾ ಮೂಲಕ ₹ 504 ಕೋಟಿ ವೆಚ್ಚದಲ್ಲಿ ಕ್ರೀಡಾ ಅಂಕಣಗಳನ್ನು ನಿರ್ಮಿಸಲು ಸೂಚಿಸಲಾಗಿದೆ. ಗ್ರಾಮೀಣ ಪ್ರತಿಭೆಗಳಿಗೆ ಸೂಕ್ತ ತರಬೇತಿ ಸಿಗಬೇಕು ಎನ್ನುವುದು ಸರ್ಕಾರದ ಆಶಯ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT