ಮಂಗಳವಾರ, ಅಕ್ಟೋಬರ್ 20, 2020
21 °C
ಧಾರವಾಡ ಜಿ.ಪಂ. ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣ

ಪರಮೇಶ್ವರ ಹೇಳಿಕೆ ದಾಖಲಿಸಿದ ಸಿಬಿಐ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಿನ ಗೃಹ ಸಚಿವರಾಗಿದ್ದ ಡಾ.ಜಿ. ಪರಮೇಶ್ವರ ಅವರನ್ನು ಇತ್ತೀಚೆಗೆ ವಿಚಾರಣೆ ನಡೆಸಿದ ಸಿಬಿಐ ತಂಡ, ಅವರ ಹೇಳಿಕೆ ದಾಖಲಿಸಿಕೊಂಡಿದೆ.

2016ರ ಜೂನ್‌ 15ರಂದು ಯೋಗೇಶ್‌ ಗೌಡ ಕೊಲೆ ನಡೆದಿತ್ತು. ಆಗ ಪರಮೇಶ್ವರ ಗೃಹ ಸಚಿವರಾಗಿದ್ದರು. ‘ಭೂ ವಿವಾದದ ಕಾರಣದಿಂದ ಕೊಲೆ ನಡೆದಿರುವ ಮಾಹಿತಿ ಲಭಿಸಿದೆ’ ಎಂದು ಪರಮೇಶ್ವರ ಆ ದಿನವೇ ಹೇಳಿಕೆ ನೀಡಿದ್ದರು. ಈ ಕುರಿತು ಸಿಬಿಐ ಅಧಿಕಾರಿಗಳ ತಂಡ ವಿಚಾರಣೆ ನಡೆಸಿದೆ ಎಂದು ಗೊತ್ತಾಗಿದೆ.

ಪರಮೇಶ್ವರ ಅವರ ಮನೆಗೆ ತೆರಳಿ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಕೊಲೆ ನಡೆದ ದಿನ ಯಾವ ಮೂಲದಿಂದ ಅವರಿಗೆ ಆ ಮಾಹಿತಿ ಲಭಿಸಿತ್ತು ಮತ್ತು ಪೊಲೀಸ್‌ ಅಧಿಕಾರಿಗಳಿಂದ ಯಾವ ರೀತಿಯ ವರದಿಗಳು ಬಂದಿದ್ದವು ಎಂಬುದರ ಕುರಿತು ತನಿಖಾ ತಂಡ ಮಾಹಿತಿ ಸಂಗ್ರಹಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು