ಭಾನುವಾರ, ಮೇ 29, 2022
22 °C

ದೇವನಹಳ್ಳಿ: ಯುವ ಜೋಡಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಾವು–ಪ್ರಾತಿನಿಧಿಕ ಚಿತ್ರ

ದೇವನಹಳ್ಳಿ: 10 ದಿನಗಳ ಹಿಂದೆ ಪತಿ–ಪತ್ನಿ ಎಂದು ಹೇಳಿಕೊಂಡು ಬಾಡಿಗೆ ಮನೆ ಪಡೆದಿದ್ದ ಜೋಡಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೇವನಹಳ್ಳಿ ಟೌನ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರು ಜ್ಯೋತಿ (25) ಮತ್ತು ಬಸವರಾಜು (25). ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನವರು ಎಂದು ತಿಳಿದು ಬಂದಿದೆ.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಇವರು, ಬಾಡಿಗೆ ಮನೆಯಲ್ಲಿದ್ದ ಫ್ಯಾನ್‌ಗೆ ಒಂದೇ ಸೀರೆಯಲ್ಲಿ ನೇಣು ಹಾಕಿಕೊಂಡಿದ್ದಾರೆ.

ಸೋಮವಾರ ಬೆಳಿಗ್ಗೆ ಮನೆಯಿಂದ ಕೆಟ್ಟ ವಾಸನೆ ಬರುತ್ತಿದ್ದನ್ನು ಗಮನಿಸಿ ನೆರೆಹೊರೆಯವರು ಮಾಲೀಕರಿಗೆ ಸುದ್ದಿ ತಿಳಿಸಿದ್ದರು.

ಎರಡು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು