ಶನಿವಾರ, ಮೇ 28, 2022
24 °C

ಬೆಂಗಳೂರು: ಕಾರಿನಲ್ಲಿ ಬಂದು ಹೂವಿನ ಕುಂಡ ಕದಿಯುವ ಯುವತಿ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಯುವತಿ‌ಯೊಬ್ಬಳು ರಾತ್ರಿ ಹೊತ್ತಿನಲ್ಲಿ ಐಷಾರಾಮಿ ಕಾರಿನಲ್ಲಿ ಬಂದು ಮನೆ ಯೊಂದರ ಕಾಂಪೌಂಡ್‌ನಲ್ಲಿ ಇಟ್ಟಿರುವ ಹೂವಿನ ಕುಂಡಗಳನ್ನು ಕದ್ದೊಯ್ಯುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದು ಸಾಮಾಜಿಕ ಜಾಲತಾಣಗಳಲ್ಲೂ ಹರಿದಾಡುತ್ತಿದೆ.

ಪ್ಯಾಂಟ್‌ ಹಾಗೂ ಕಪ್ಪು ಬಣ್ಣದ ಟೀಶರ್ಟ್‌ ಧರಿಸಿರುವ ಯುವತಿಯು ಕೆಂಪು ಬಣ್ಣದ ಕಾರಿನಿಂದ ಇಳಿದು ಹೂವಿನ ಕುಂಡಗಳನ್ನು ಎತ್ತಿಕೊಂಡು ಹೋಗಿ ಕಾರಿನ ಡಿಕ್ಕಿಯಲ್ಲಿ ಇಟ್ಟು ಕೊಂಡು ಪರಾರಿಯಾಗುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ.

ಸಂಜಯನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ಆರ್‌ಎಂವಿ ಎರಡನೇ ಹಂತದಲ್ಲಿರುವ ಕಾವ್ಯ ಸೆಲ್ವಂ ಎಂಬುವರ ಮನೆಯಿಂದ ಈ ಕುಂಡಗಳು ಕಳುವಾಗಿವೆ. ಅವರು ಸಿಸಿಟಿವಿ ದೃಶ್ಯಾವಳಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು ಅದನ್ನು ಬೆಂಗಳೂರು ಪೊಲೀಸರಿಗೂ ಟ್ಯಾಗ್‌ ಮಾಡಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.