ಬೆಂಗಳೂರು: ಕೇವಲ 50 ರೂಪಾಯಿಗಾಗಿ ಸ್ನೇಹಿತರ ನಡುವೆ ನಡೆದ ಜಗಳವು ಒಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ ಕುರುಬರಹಳ್ಳಿ ವೃತ್ತದ ಬಳಿ ಮಂಗಳವಾರ ರಾತ್ರಿ ನಡೆದಿದೆ.

ಶಿವಮಾಧು (24) ಕೊಲೆಯಾದ ಯುವಕ. ಶಿವಮಾಧುನನ್ನು ಸ್ನೇಹಿತ ಶಾಂತಕುಮಾರ್ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಶಿವಮಾಧು ಮತ್ತು ಶಾಂತಕುಮಾರ್ ಚಿಕ್ಕಂದಿನಿಂದ ಒಟ್ಟಿಗೆ ಆಡಿ ಬೆಳೆದವರು. ಕುರುಬರಹಳ್ಳಿ ವೃತ್ತದ ಬಳಿಯಿಂದ ಕೆಲವು ವರ್ಷಗಳ ಹಿಂದೆ ಲಗ್ಗೆರೆ ಬ್ರಿಡ್ಜ್ ಬಳಿಗೆ ಸ್ಥಳಾಂತರ ಆಗಿದ್ದರು. ಆದರೂ ಕುರುಬರಹಳ್ಳಿ ವೃತ್ತದ ಬಳಿಗೆ ಆಗಾಗ ಬರುತ್ತಿದ್ದರು. ಆರೋಪಿ ಜೊಮ್ಯಾಟೋ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರೆ, ಮೃತ ಶಿವಮಾಧು ಆಟೋ ಚಾಲಕನಾಗಿದ್ದ.

ಎಂದಿನಂತೆ ಮಂಗಳವಾರ ಸಂಜೆ ಕುರುಬರಹಳ್ಳಿ ವೃತ್ತದ ಕಡೆ ಬಂದಿದ್ದ ಶಿವಮಾಧು, ಶಾಂತಕುಮಾರ್ ಮತ್ತು ಸ್ನೇಹಿತರು ಸಮೀಪದ ಮೈದಾನವೊಂದರಲ್ಲಿ ಕ್ರಿಕೆಟ್ ಆಡಲು ಹೋಗಿದ್ದಾರೆ. ಕ್ರಿಕೆಟ್ ಆಡಿ ಬಂದವರೇ ಏನೋ ಕೆಲಸಕ್ಕೆಂದು ರಾತ್ರಿ 8.30ರ ಸುಮಾರಿಗೆ ವೃತ್ತದ ಬಳಿಯಿರುವ ಸೈಬರ್ ಸೆಂಟರ್ಗೆ ಹೋಗಿದ್ದರು.

ಈ ವೇಳೆ ಶಾಂತಕುಮಾರ್ ಜೇಬಿನಿಂದ ಶಿವಮಾಧು 50 ರೂಪಾಯಿ ತೆಗೆದುಕೊಂಡಿದ್ದಾನೆ.ವಈ ವೇಳೆ ಇಬ್ಬರ ಮಧ್ಯೆ ಜಗಳವಾಗಿದೆ. ಆಗ ತನ್ನ ಬಳಿ ಇದ್ದ ಚಾಕುವಿನಿಂದ ಶಿವಮಾಧು ಎದೆಗೆ ಶಾಂತಕುಮಾರ್ ಚುಚ್ಚಿ ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವದಿಂದ ಬಿದ್ದಿದ್ದ ಶಿವಮಾಧುನನ್ನು ಸ್ನೇಹಿತರು ಸ್ಥಳೀಯ ಆಸ್ಪತ್ರೆಗೆ ಸೇರಿಸಿದರೂ ಆತ ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಸವೇಶ್ವರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಒಬ್ಬ ದುಷ್ಟ ರಾಜ’: ಟ್ವೀಟ್ ಮೂಲಕ ಉದ್ಧವ್ ಠಾಕ್ರೆಯನ್ನು ಕೆಣಕಿದ ಅಮೃತಾ ಫಡಣವೀಸ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.