ಮಂಗಳವಾರ, 8 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಪ್ರೀತಿ ವಿಚಾರಕ್ಕೆ ಸ್ನೇಹಿತರ ಮಧ್ಯೆ ಗಲಾಟೆ: ಯುವಕನ ಕೊಲೆ

Published : 21 ಸೆಪ್ಟೆಂಬರ್ 2024, 14:22 IST
Last Updated : 21 ಸೆಪ್ಟೆಂಬರ್ 2024, 14:22 IST
ಫಾಲೋ ಮಾಡಿ
Comments

ಬೆಂಗಳೂರು: ಗೆದ್ದಲಹಳ್ಳಿಯಲ್ಲಿ ಒಂದೇ ಕೊಠಡಿಯಲ್ಲಿ ವಾಸವಿದ್ದ ಸ್ನೇಹಿತರ ಮಧ್ಯೆ ಗಲಾಟೆ ನಡೆದು ಯುವಕನನ್ನು ಕೊಲೆ ಮಾಡಲಾಗಿದ್ದು, ಸಂಜಯನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ವರುಣ್ ಕೋಟ್ಯಾನ್ (24) ಕೊಲೆಯಾದ ಯುವಕ.

ಕೊಲೆ ಪ್ರಕರಣದ ಸಂಬಂಧ ದಿವೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ವರುಣ್‌ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ನಡೆಸಲಾಗಿತ್ತು ಎಂದು ಪೊಲೀಸರು ಹೇಳಿದರು.

ಬಾಗಲೂರಿನ ಕಂಪನಿಯೊಂದರ ಕೆಲಸ ಮಾಡುತ್ತಿದ್ದ ವರುಣ್ ಹಾಗೂ ಆರೋಪಿ ದಿವೇಶ್ ಒಂದು ವರ್ಷದಿಂದ ಗೆದ್ದಲಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಯುವತಿಯೊಬ್ಬಳ ವಿಚಾರವಾಗಿ ವರುಣ್ ಕೊಲೆ ನಡೆದಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.

‘ಯುವತಿಯೊಬ್ಬಳನ್ನು ದಿವೇಶ್‌ ಪ್ರೀತಿಸುತ್ತಿದ್ದ. ಇತ್ತೀಚೆಗೆ ಆಕೆ ದಿವೇಶ್‌ನಿಂದ ದೂರವಾಗಿದ್ದಳು. ಬಳಿಕ, ವರುಣ್‌ನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಇದೇ ವಿಚಾರಕ್ಕೆ ಶುಕ್ರವಾರ ರಾತ್ರಿ ಸ್ನೇಹಿತರಿಬ್ಬರ ನಡುವೆ ಜಗಳವಾಗಿದೆ. ಶನಿವಾರ ಬೆಳಿಗ್ಗೆಯೂ ಜಗಳ ಮಾಡಿಕೊಂಡಿದ್ದರು. ಮನೆಯಿಂದ ಹೊರಬಂದಾಗ ಸಿಟ್ಟಿಗೆದ್ದ ಆರೋಪಿ ದಿವೇಶ್, ವರುಣ್‌ನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

‘ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಾಯಿತು. ಸ್ಥಳದಲ್ಲೇ ಇದ್ದ ಆರೋಪಿಯನ್ನು ವಶಕ್ಕೆ ಪಡೆದು ಬಂಧಿಸಲಾಯಿತು’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT