ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಯುವತಿ ಅಪಹರಿಸಿ ಅತ್ಯಾಚಾರ: ಸ್ನೇಹಿತನಿಂದ ಕೃತ್ಯ

ಹೈಗ್ರೌಂಡ್ಸ್ ಠಾಣೆ ಪೊಲೀಸರ ತನಿಖೆ * ಎರಡು ಗಂಟೆಯಲ್ಲಿ ಆರೋಪಿಗಳು ಸೆರೆ
Published 25 ಏಪ್ರಿಲ್ 2024, 15:37 IST
Last Updated 25 ಏಪ್ರಿಲ್ 2024, 15:37 IST
ಅಕ್ಷರ ಗಾತ್ರ

ಬೆಂಗಳೂರು: ಯುವತಿಯೊಬ್ಬರನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಆರೋಪದಡಿ ಸ್ನೇಹಿತ ಸೇರಿ ಐವರನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಠಾಣೆ ವ್ಯಾಪ್ತಿಯಲ್ಲಿರುವ ಪೇಯಿಂಗ್ ಗೆಸ್ಟ್‌ (ಪಿ.ಜಿ) ಕಟ್ಟಡವೊಂದರಲ್ಲಿ ವಾಸವಿದ್ದ ಯುವತಿಯನ್ನು ಏಪ್ರಿಲ್ 20ರಂದು ಬೆಳಿಗ್ಗೆ 8.30 ಗಂಟೆ ಸುಮಾರಿಗೆ ಅಪಹರಿಸಲಾಗಿತ್ತು. ಕಟ್ಟಡದ ಮಾಲೀಕ ನೀಡಿದ್ದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ, ಕೇವಲ ಎರಡು ಗಂಟೆಯೊಳಗಾಗಿ ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ’ ಎಂದು ಹ್ರೈಗ್ರೌಂಡ್ಸ್ ಠಾಣೆ ಪೊಲೀಸ್ ಮೂಲಗಳು ಹೇಳಿವೆ.

‘ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸ್ನೇಹಿತ, ಆತನ ಸಹೋದರ ಹಾಗೂ ಮೂವರು ಸ್ನೇಹಿತರನ್ನು ಬಂಧಿಸಲಾಗಿದೆ. ಎಲ್ಲರೂ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

ಹಲವು ವರ್ಷಗಳ ಪರಿಚಯ: ‘ಸಂತ್ರಸ್ತ ಯುವತಿ ಹಾಗೂ ಆರೋಪಿ, ಹಲವು ವರ್ಷಗಳಿಂದ ಪರಿಚಿತರು. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರೆಂದು ಗೊತ್ತಾಗಿದೆ. ಇತ್ತೀಚೆಗೆ ಯುವತಿಗೆ ಸರ್ಕಾರಿ ನೌಕರಿ ಸಿಕ್ಕಿತ್ತು. ಪೇಯಿಂಗ್ ಗೆಸ್ಟ್ ಕಟ್ಟಡದಲ್ಲಿ ಉಳಿದುಕೊಂಡು, ಅಲ್ಲಿಂದಲೇ ಕೆಲಸಕ್ಕೆ ಹೋಗಿ ಬರುತ್ತಿದ್ದರು’ ಎಂದು ಮೂಲಗಳು ಹೇಳಿವೆ.

‘ಆರೋಪಿ ಹಾಗೂ ಯುವತಿ ಹಲವು ಬಾರಿ ಭೇಟಿಯಾಗಿದ್ದರು. ಹಲವೆಡೆ ಸುತ್ತಾಡಿದ್ದರು. ಆರೋಪಿ, ತನ್ನನ್ನೇ ಮದುವೆಯಾಗುವಂತೆ ಯುವತಿಯನ್ನು ಪೀಡಿಸಲಾರಂಭಿಸಿದ್ದ. ಸರ್ಕಾರಿ ನೌಕರಿ ಸಿಗುತ್ತಿದ್ದಂತೆ ಯುವತಿ, ಆರೋಪಿಯಿಂದ ಅಂತರ ಕಾಯ್ದುಕೊಂಡಿದ್ದರು. ಕರೆ ಮಾಡಿದರೂ ಸ್ವೀಕರಿಸುತ್ತಿರಲಿಲ್ಲ.’

‘ಕೋಪಗೊಂಡಿದ್ದ ಆರೋಪಿ, ಯುವತಿಯನ್ನು ಅಪಹರಿಸಿ ಅತ್ಯಾಚಾರವೆಸಗಲು ಸಂಚು ರೂಪಿಸಿದ್ದ. ಸಹೋದರ ಹಾಗೂ ಸ್ನೇಹಿತರಿಗೆ ವಿಷಯ ತಿಳಿಸಿ ಸಹಕಾರ ಕೋರಿದ್ದ. ಅವರೆಲ್ಲರೂ ಒಪ್ಪಿಕೊಂಡಿದ್ದರು’ ಎಂದು ತಿಳಿಸಿವೆ.

‘ಪೇಯಿಂಗ್ ಗೆಸ್ಟ್ ಕಟ್ಟಡ ಬಳಿ ಹೋಗಿದ್ದ ಆರೋಪಿಗಳು, ಯುವತಿಯನ್ನು ಅಪಹರಿಸಿ ಕಾರಿನಲ್ಲಿ ಕರೆದೊಯ್ದಿದ್ದರು. ಕೊಠಡಿಯೊಂದರಲ್ಲಿ ಯುವತಿ ಮೇಲೆ ಸ್ನೇಹಿತ ಅತ್ಯಾಚಾರ ಎಸಗಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದು ಹೇಳಿವೆ.

‘ಪ್ರಕರಣದ ಬಗ್ಗೆ ವೈಯಕ್ತಿಕ ಮಾಹಿತಿ ಬಹಿರಂಗಪಡಿಸದಂತೆ ದೂರುದಾರರು ಕೋರಿದ್ದಾರೆ. ಹೀಗಾಗಿ, ಪ್ರಕರಣದ ಎಲ್ಲ ಮಾಹಿತಿ ಗೌಪ್ಯವಾಗಿರಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT