ಲಿಖಿತಾ ಅವರು ಬಿಹಾರ ಮೂಲದ ಯುವಕನನ್ನು ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇತ್ತೀಚೆಗೆ ಇಬ್ಬರೂ ಪರಸ್ಪರ ದೂರವಾಗಿದ್ದರು. ಇದರಿಂದ ನೊಂದಿದ್ದರು. ಅದೇ ನೋವಿನಲ್ಲಿ ತಂಗಿ ಏನಾದರೂ ಅನಾಹುತ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದು ಅರಿತು ಬೆಂಗಳೂರಿಗೆ ಕರೆಸಿಕೊಂಡಿದ್ದರು. ಮಂಗಳವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಮನೆಯಿಂದ ಆಚೆ ಬಂದಿದ್ದ ಲಿಖಿತಾ ಅವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.