ಬೆಂಗಳೂರು: ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ರಾಯಸಂದ್ರ ಮುಖ್ಯರಸ್ತೆಯ ನಿರ್ಮಾಣ ಹಂತದ ಕಟ್ಟಡವೊಂದರ ಮೇಲೆ ‘ರೀಲ್ಸ್’ ಮಾಡುತ್ತಿದ್ದ ವೇಳೆ ಕಾಲುಜಾರಿ ಬಿದ್ದು ಯುವತಿ ಮೃತಪಟ್ಟಿದ್ದಾರೆ.

ಆಂಧ್ರಪ್ರದೇಶದ ನಂದಿನಿ (21) ಮೃತ ಯುವತಿ.

ನಗರದ ಭುವನೇಶ್ವರಿ ಲೇಔಟ್ನ ಪಿ.ಜಿಯೊಂದರಲ್ಲಿ ಯುವತಿ ನೆಲಸಿದ್ದರು. ರಿಲಯನ್ಸ್ ಮಾರ್ಟ್ನಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿಕೊಂಡು ಸೋಮವಾರ ಸಂಜೆ ಪಿ.ಜಿಗೆ ಬಂದಿದ್ದರು. ನಂತರ, ಸ್ನೇಹಿತರ ಜತೆ ಪಾರ್ಟಿ ಮಾಡಲು ರಾಯಸಂದ್ರ ಮುಖ್ಯರಸ್ತೆ ಸಮೀಪ ಇರುವ ನಿರ್ಮಾಣ ಹಂತದ ಅಪಾರ್ಟ್ಮೆಂಟ್ವೊಂದಕ್ಕೆ ಹೋಗಿದ್ದರು. ನಾಲ್ವರೂ ರಾತ್ರಿ 9 ಗಂಟೆಯವರೆಗೂ ಮದ್ಯ ಸೇವಿಸಿದ್ದರು. ಪಾರ್ಟಿ ಮುಗಿದ ಬಳಿಕ ‘ರೀಲ್ಸ್’ ಮಾಡಲು 14ನೇ ಮಹಡಿ ಮೇಲೇರಿದ್ದರು. ಆಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.

ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮೃತ ನಂದಿನಿ ಜತೆಗಿದ್ದ ಯುವತಿ ಹಾಗೂ ಇಬ್ಬರು ಯುವಕರನ್ನು ಪ್ರಾಥಮಿಕ ವಿಚಾರಣೆ ನಡೆಸಲಾಗಿದೆ. ಮದ್ಯ ಸೇವಿಸಿದ್ದ ನಂದಿನಿ ‘ರೀಲ್ಸ್’ ಮಾಡುವ ವೇಳೆ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾಳೆ ಎಂಬುದಾಗಿ ಅವರು ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.