ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಪರಿಚಯವಾದ ಯುವತಿ ಮೇಲೆ ಅತ್ಯಾಚಾರವೆಸಗಿ, ಆಕೆಯ ಖಾಸಗಿ ಕ್ಷಣಗಳ ವಿಡಿಯೊ ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಯುವಕನನ್ನು ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸುಬ್ರಹ್ಮಣ್ಯನಗರ ನಿವಾಸಿ 24 ವರ್ಷದ ಯುವತಿ ನೀಡಿದ ದೂರಿನ ಮೇರೆಗೆ ಅತ್ಯಾಚಾರ ಆರೋಪದಡಿ ಬಸವೇಶ್ವರನಗರ ನಿವಾಸಿ ನಿರಂಜನ್ (30) ಎಂಬಾತನನ್ನು ಬಂಧಿಸಲಾಗಿದೆ. ಮತ್ತೊಂದೆಡೆ ನಿರಂಜನ್ ಅವರ ತಂದೆ ರಾಜಶೇಖರ್ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

‘ಫೇಸ್ಬುಕ್ನಲ್ಲಿ ಕೆಲ ವರ್ಷಗಳ ಹಿಂದೆ ಪರಿಚಯವಾದ ಯುವತಿ ಜತೆ ಆತ್ಮೀಯತೆ ಹೊಂದಿದ್ದ ನಿರಂಜನ್, ಆಕೆಯ ಖಾಸಗಿ ಕ್ಷಣಗಳ ವಿಡಿಯೊ ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಏಪ್ರಿಲ್ನಿಂದ ಆಗಸ್ಟ್ 20ರ ಅವಧಿಯಲ್ಲಿ ಯುವತಿ ಮೇಲೆ 2-3 ಬಾರಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ, ಆಕೆಯ ದ್ವಿಚಕ್ರ ವಾಹನಕ್ಕೆ ಜಿಪಿಎಸ್ ಅಳವಡಿಸಿ ಆಕೆಯ ಚಲನವಲನಗಳ ಮೇಲೆ ನಿಗಾವಹಿಸಿದ್ದ. ಈ ವಿಚಾರ ತಿಳಿದು, ನಿರಂಜನ್ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಆಗ ಮತ್ತೊಮ್ಮೆ ಈ ರೀತಿ ಮಾಡುವುದಿಲ್ಲ ಎಂದು ಠಾಣೆಯಲ್ಲಿ ಮುಚ್ಚಳಿಕೆ ಪತ್ರ ಬರೆದುಕೊಟ್ಟು ಕ್ಷಮೆ ಕೇಳಿದ್ದ. ಕೆಲ ದಿನಗಳ ಬಳಿಕ ಮತ್ತೆ ಆರೋಪಿ ವಿಡಿಯೊ ಕಳುಹಿಸಿ ಬ್ಲ್ಯಾಕ್ಮೇಲ್ ಮಾಡಿ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದ’ ಎಂದು ಪೊಲೀಸರು ಹೇಳಿದರು.

‘ಪುತ್ರ ನಿರಂಜನ್ನ ಮೊಬೈಲ್ನಲ್ಲಿದ್ದ ಸಂತ್ರಸ್ತೆಯ ಖಾಸಗಿ ವಿಡಿಯೊಗಳನ್ನು ಗಮನಿಸಿದ್ದ ಆತನ ತಂದೆ ರಾಜಶೇಖರ್, ಯುವತಿಗೆ ಕರೆ ಮಾಡಿ, ನಿನ್ನ ಅಶ್ಲೀಲ ವಿಡಿಯೊ ಮತ್ತು ಫೋಟೊಗಳು ತನ್ನ ಬಳಿಯಿದ್ದು, ತನ್ನ ಜತೆ ದೈಹಿಕ ಸಂಬಂಧ ಹೊಂದಬೇಕು. ಜತೆಗೆ ತಾನು ಹೇಳಿದವರ ಜತೆಯೂ ಲೈಂಗಿಕ ಕ್ರಿಯೆ ನಡೆಸಬೇಕು ಎಂದು ಬ್ಲ್ಯಾಕ್ಮೇಲ್ ಮಾಡುತ್ತಿದ್ದ’ ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ. ನಾಪತ್ತೆಯಾಗಿರುವ ರಾಜಶೇಖರ್ ಪತ್ತೆ ಕಾರ್ಯ ನಡೆಯುತ್ತಿದೆ. ರಾಜಶೇಖರ್ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದಾರೆ’ ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.