ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕಿಗೆ ಚುಂಬನ: ಯುವಕ ಬಂಧನ

Last Updated 29 ಆಗಸ್ಟ್ 2021, 20:26 IST
ಅಕ್ಷರ ಗಾತ್ರ

ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಪ್ರಾಪ್ತ ಬಾಲಕಿಗೆ ಬಲವಂತವಾಗಿ ಚುಂಬಿಸಿ, ಬಳಿಕ ಪ್ರೀತಿಸುವಂತೆ ಪೀಡಿಸಿದ ಯುವಕನನ್ನು ಪೀಣ್ಯ ಪೊಲೀಸರು ಬಂಧಿಸಿದ್ದಾರೆ.

16 ವರ್ಷದ ಬಾಲಕಿಯ ತಾಯಿ ಕೊಟ್ಟಿರುವ ದೂರಿನ ಆಧಾರದಲ್ಲಿ ಆಟೊ ಚಾಲಕನಾಗಿರುವ ಆರೋಪಿಯನ್ನು ವಶಕ್ಕೆ ಪ‍ಡೆಯಲಾಗಿದೆ.

‘ಬಾಲಕಿಯು ದೊಡ್ಡಬಿದರಕಲ್ಲು ನಿವಾಸಿಯಾಗಿದ್ದು, ಆರೋಪಿ ಕೂಡ ಇದೇ ಪ್ರದೇಶದಲ್ಲಿ ವಾಸವಿದ್ದ. ಬಾಲಕಿಯನ್ನು ಪ್ರೀತಿಸುತ್ತಿದ್ದ ಆತ ಒಮ್ಮೆ ಪ್ರೇಮ ನಿವೇದನೆ ಮಾಡಿಕೊಂಡಿದ್ದ. ಇದಕ್ಕೆ ಆಕೆ ಒಪ್ಪಿರಲಿಲ್ಲ. ಬಾಲಕಿಯು ಶನಿವಾರ ಸಂಜೆ ಏಕಾಂಗಿಯಾಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ಗಮನಿಸಿ ಆಕೆಯನ್ನು ಹಿಂಬಾಲಿಸಿಕೊಂಡು ಬಂದಿದ್ದ ಆತ ನಂತರ ಬಲವಂತವಾಗಿ ಮುತ್ತು ಕೊಟ್ಟಿದ್ದ. ಆರೋಪಿಯ ವರ್ತನೆಯಿಂದ ಹೆದರಿದ ಬಾಲಕಿ ಸಹಾಯಕ್ಕಾಗಿ ಕೂಗಿಕೊಂಡಿದ್ದಳು. ತಕ್ಷಣವೇ ಆರೋಪಿ ಅಲ್ಲಿಂದ ಪರಾರಿಯಾಗಿದ್ದ’ ಎಂದು ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರಕುಮಾರ್‌ ಮೀನಾ ತಿಳಿಸಿದ್ದಾರೆ.

‘ಆರೋಪಿಯು ಯುವತಿಯನ್ನು ಚುಂಬಿಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಈ ಸಂಬಂಧ ಹುಡುಗಿಯ ತಾಯಿ ದೂರು ನೀಡಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT