ಗುರುವಾರ , ಆಗಸ್ಟ್ 18, 2022
23 °C

ಎಎಸ್‌ಐ ಮೇಲೆ ಹಲ್ಲೆ ಆರೋಪ; ಯುವಕ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

DH File

ಬೆಂಗಳೂರು: ಮಾಸ್ಕ್ ಹಾಕದಿದ್ದನ್ನು ಪ್ರಶ್ನಿಸಿದ್ದಕ್ಕಾಗಿ ಎಎಸ್‌ಐ ಮೇಲೆ ಹಲ್ಲೆ ಮಾಡಿದ್ದ ಆರೋಪದಡಿ ಅಕ್ಷಯ್ ಎಂಬಾತನನ್ನು ವಿದ್ಯಾರಣ್ಯಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ಸ್ಥಳೀಯ ನಿವಾಸಿ ಅಕ್ಷಯ್, ವಿದ್ಯಾರಣ್ಯಪುರ ಮುಖ್ಯರಸ್ತೆಯಲ್ಲಿ ಬೈಕ್‌ನಲ್ಲಿ ಹೊರಟಿದ್ದ. ಅದೇ ಸಂದರ್ಭದಲ್ಲೇ ಕರ್ತವ್ಯದಲ್ಲಿದ್ದ ಎಎಸ್‌ಐ, ಆತನನ್ನು ತಡೆದು ಪ್ರಶ್ನಿಸಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಅಕ್ಷಯ್ ಮಾಸ್ಕ್ ಹಾಕಿರಲಿಲ್ಲ. ಅದನ್ನು ಕೇಳಿದ್ದ ಎಎಸ್‌ಐ, ಮಾಸ್ಕ್ ಹಾಕಿಕೊಳ್ಳುವಂತೆ ಬುದ್ಧಿವಾದ ಹೇಳಿದ್ದರು. ದಂಡ ಕಟ್ಟುವಂತೆಯೂ ಸೂಚಿಸಿದ್ದರು. ಅಷ್ಟಕ್ಕೆ ಸಿಟ್ಟಾದ ಅಕ್ಷಯ್ ಹಲ್ಲೆ ಮಾಡಿದ್ದ. ರಕ್ಷಣೆಗೆ ಹೋಗಿದ್ದ ಸಿಬ್ಬಂದಿ, ಆತನನ್ನು ಹಿಡಿದುಕೊಂಡು ಬೈಕ್‌ ಸಮೇತ ಠಾಣೆಗೆ ಕರೆತಂದಿದ್ದಾರೆ’ ಎಂದೂ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು