ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Namma Metro: ಮೆಟ್ರೊ ಹಳಿಗೆ ಹಾರಿ ಯುವಕ ಆತ್ಮಹತ್ಯೆ

Published : 3 ಆಗಸ್ಟ್ 2024, 13:28 IST
Last Updated : 3 ಆಗಸ್ಟ್ 2024, 13:28 IST
ಫಾಲೋ ಮಾಡಿ
Comments

ಬೆಂಗಳೂರು: ‘ನಮ್ಮ ಮೆಟ್ರೊ’ ಹಸಿರು ಮಾರ್ಗದಲ್ಲಿ ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ ಶನಿವಾರ ಸುಮಾರು 35 ವರ್ಷದ ಯುವಕ ಮೆಟ್ರೊ ರೈಲು ಬರುವ ಸಮಯದಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶನಿವಾರ ಸಂಜೆ 5.45ಕ್ಕೆ ಘಟನೆ ನಡೆದಿದೆ. ಯಲಚೇನಹಳ್ಳಿ ನಿಲ್ದಾಣದಿಂದ ರೇಷ್ಮೆ ಸಂಸ್ಥೆ ಕಡೆಗೆ ಮೆಟ್ರೊ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ನಾಗಸಂದ್ರದಿಂದ ಯಲಚೇನಹಳ್ಳಿವರೆಗೆ ಮೆಟ್ರೊ ಸಂಚಾರ ಎಂದಿನಂತೆ ಇದೆ. ಮೃತ ಯುವಕನ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಗಳು ತಿಳಿಸಿದ್ದಾರೆ.

ಐದನೇ ಘಟನೆ: ಈ ವರ್ಷ ಮೆಟ್ರೊ ಹಳಿಗೆ ಹಾರಿದ ಐದನೇ ಘಟನೆ ಇದಾಗಿದೆ. ಮಾರ್ಚ್‌ನಲ್ಲಿ ಅತ್ತಿಗುಪ್ಪೆ ಮೆಟ್ರೊ ನಿಲ್ದಾಣದಲ್ಲಿ ಯುವಕನೊಬ್ಬ ಹಾರಿ ಜೀವ ಕಳೆದುಕೊಂಡಿದ್ದ. ಜನವರಿಯಲ್ಲಿ ಜಾಲಹಳ್ಳಿ ಮೆಟ್ರೊ ನಿಲ್ದಾಣದಲ್ಲಿ ಕೇರಳದ ಯುವಕ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ. ಇಂದಿರಾನಗರ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಕೆಳಗೆ ಬಿದ್ದ ಮೊಬೈಲ್‌ ಎತ್ತಿಕೊಳ್ಳಲು ಹಳಿಗೆ ಹಾರಿದ್ದರು. ಜೂನ್‌ನಲ್ಲಿ ಹೊಸಹಳ್ಳಿ ನಿಲ್ದಾಣದಲ್ಲಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದ‌.

ಇದಲ್ಲದೇ ಎರಡು ದಿನಗಳ ಹಿಂದೆ ಬೈಯಪ್ಪನಹಳ್ಳಿ ಮೆಟ್ರೊ ನಿಲ್ದಾಣದಲ್ಲಿ ನಾಲ್ಕು ವರ್ಷದ ಬಾಲಕನೊಬ್ಬ ಆಯ ತಪ್ಪಿ ಹಳಿಗೆ ಬಿದ್ದಿದ್ದು, ಬಿಎಂಆರ್‌ಸಿಎಲ್‌ ಸಿಬ್ಬಂದಿ ರಕ್ಷಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT