ಭಾನುವಾರ, ಜುಲೈ 3, 2022
27 °C

ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಯುವಕರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೈಕ್‌ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಕೇರಳ ಮೂಲಕ ಜಿತಿನ್‌ ಜೋಶ್‌ (25) ಹಾಗೂ ಸೋನು (30) ಎಂಬುವರು ಮೃತಪಟ್ಟಿದ್ದಾರೆ. ಈ ಸಂಬಂಧ ಎಲೆಕ್ಟ್ರಾನಿಕ್‌ ಸಿಟಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಹುಸ್ಕೂರಿನಲ್ಲಿ ನೆಲೆಸಿದ್ದ ಇವರಿಬ್ಬರು ಕಟ್ಟಡ ಹಾಗೂ ಕಚೇರಿಗಳಿಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಕೆಲಸ ಮಾಡಿಕೊಂಡಿದ್ದರು. ಭಾನುವಾರ ಮಧ್ಯರಾತ್ರಿ ಇಬ್ಬರೂ ಹೀರೊ ಹೊಂಡಾ ಬೈಕ್‌ನಲ್ಲಿ ಸಾಗುತ್ತಿದ್ದಾಗ ಎದುರಿನಿಂದ ವೇಗವಾಗಿ ಬಂದ ಕೆ.ಟಿ.ಎಂ.ಡ್ಯೂಕ್‌ ಬೈಕ್‌ ಡಿಕ್ಕಿ ಹೊಡೆದಿದೆ.

ಗಂಭೀರವಾಗಿ ಗಾಯಗೊಂಡಿದ್ದ ಜಿತಿನ್‌ ಮತ್ತು ಸೋನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಅಸುನೀಗಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಕೆ.ಟಿ.ಎಂ. ಬೈಕ್‌ ಸವಾರರಾದ ಶರತ್ ಆದಿತ್ಯ (24) ಮತ್ತು ಸಂತೋಷ್ (23) ಗಂಭೀರವಾಗಿ ಗಾಯಗೊಂಡಿದ್ದು ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಗುಣಮುಖರಾದ ಬಳಿಕ ಹೇಳಿಕೆ ಪಡೆದು ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು