ಗುರುವಾರ , ಡಿಸೆಂಬರ್ 1, 2022
27 °C

ಬೆಂಗಳೂರಿನಲ್ಲಿ ಡ್ರಗ್ಸ್ ಮಾರಾಟ: ಕೇರಳ ಯುವಕನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಗರದ ಕೆಲ ಕಾಲೇಜು ವಿದ್ಯಾರ್ಥಿಗಳು ಹಾಗೂ ಇತರರಿಗೆ ಡ್ರಗ್ಸ್ ಮಾರುತ್ತಿದ್ದ ಆರೋಪದಡಿ ಕೆ.ಎಂ. ಜಿಶ್ನೂ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಕೇರಳದ ಜಿಶ್ನೂ ಡ್ರಗ್ಸ್ ಮಾರಾಟವನ್ನೇ ವೃತ್ತಿ ಮಾಡಿಕೊಂಡಿದ್ದ. ಆಗಾಗ ನಗರಕ್ಕೆ ಬರುತ್ತಿದ್ದ ಈತ ಡ್ರಗ್ಸ್ ಮಾರಿ, ತನ್ನೂರಿಗೆ ವಾಪಸು ಹೋಗುತ್ತಿದ್ದ. ಈತನನ್ನು ಬಂಧಿಸಿ, ₹ 10 ಲಕ್ಷ ಮೌಲ್ಯದ ಎಂಡಿಎಂಎ ಡ್ರಗ್ಸ್ ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.

‘ಕುಮಾರಸ್ವಾಮಿ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ಸುತ್ತಾಡುತ್ತಿದ್ದ ಆರೋಪಿ, ‌ ಡ್ರಗ್ಸ್ ಮಾರುತ್ತಿದ್ದ. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಯಿತು. ಈತನ ಜೊತೆ ಮತ್ತಷ್ಟು ಮಂದಿ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಇದೆ’ ಎಂದು ತಿಳಿಸಿದರು.

‘ಕೆಲವು ಕಾಲೇಜು ವಿದ್ಯಾರ್ಥಿಗಳು, ಉದ್ಯಮಿಗಳು, ವ್ಯಾಪಾರಿಗಳು ಆರೋಪಿ ಬಳಿ ಡ್ರಗ್ಸ್ ಖರೀದಿಸುತ್ತಿದ್ದರು. ಹೊರ ರಾಜ್ಯದಿಂದ ಕಡಿಮೆ ಹಣಕ್ಕೆ ಡ್ರಗ್ಸ್ ತರಿಸುತ್ತಿದ್ದ ಆರೋಪಿ, ಹೆಚ್ಚಿನ ಹಣಕ್ಕೆ ಮಾರಿ ಹಣ ಸಂಪಾದಿಸುತ್ತಿದ್ದ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು