ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಥಳೀಯ ಸಂಸ್ಥೆ ಚುನಾವಣೆಗೆ ಯುವ ನಾಯಕತ್ವ ಸೃಷ್ಟಿ: ಧೀರಜ್ ಮುನಿರಾಜು

Published 7 ಮಾರ್ಚ್ 2024, 19:10 IST
Last Updated 7 ಮಾರ್ಚ್ 2024, 19:10 IST
ಅಕ್ಷರ ಗಾತ್ರ

ಬೆಂಗಳೂರು: ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹೊಸ ಮತದಾರರ ಜತೆಗೆ ಹೊಸ ನಾಯಕತ್ವ ಸೃಷ್ಟಿ ಮಾಡುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಯುವ ಮೋರ್ಚಾ ವತಿಯಿಂದ ನಮೋ ಯುವ ಭಾರತ ಫೆಲೋಶಿಪ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದು ಯುವ ಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜು ತಿಳಿಸಿದರು.

ಬಿಜೆಪಿ ಕಚೇರಿಯಲ್ಲಿ ನಮೋ ಯುವ ಭಾರತ ಫೆಲೋಶಿಪ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಯುವಕರು ರಾಜಕೀಯಕ್ಕೆ ಬರಬೇಕು ಎಂಬ ಅಪೇಕ್ಷೆ ಪ್ರಧಾನಿ ಮೋದಿ ಅವರದು. ಕಾಲೇಜುಗಳಲ್ಲಿ ಎಲ್ಲೂ ಚುನಾವಣೆ ನಡೆಯುತ್ತಿಲ್ಲ. ಯುವಕರು ರಾಜಕೀಯ ಸಂಪರ್ಕದಿಂದ ದೂರ ಇದ್ದಾರೆ. ನಮೋ ಯುವ ಭಾರತ ಫೆಲೋಶಿಪ್‌ ಮುಂದಿನ ಒಂದೂವರೆ ತಿಂಗಳ ಕಾಲ ನಡೆಯಲಿದೆ ಎಂದರು.

ಯುವ ಜನತೆ ಸಾಮಾಜಿಕ ಜಾಲತಾಣದಲ್ಲಿ ತಮ್ಮನ್ನು ಹೆಚ್ಚಾಗಿ ತೊಡಗಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ ಅವರು ಜಾರಿ ತಂದಿರುವ ವಿವಿಧ ಯೋಜನೆಗಳು, ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು, ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ಯುವ ಜನತೆಗೆ ಕಿರು ಚಿತ್ರಗಳ ಸ್ಪರ್ಧೆಯನ್ನು ಏರ್ಪಡಿಸಲಾಗುತ್ತಿದೆ. ಟಾಪ್‌ 10 ರೀಲ್‌ಗಳಿಗೆ ನರೇಂದ್ರ ಮೋದಿ ಅವರ ಭೇಟಿಯ ಅವಕಾಶ ಲಭಿಸಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT