ಬೆಂಗಳೂರು: ‘ರಾಷ್ಟ್ರದ ಭವಿಷ್ಯ ಯುವಸಮೂಹದ ಕೈಯಲ್ಲಿದ್ದು, ಎಲ್ಲರೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಬೇಕು. ಪ್ರತಿ ಚುನಾವಣೆಯಲ್ಲಿಯೂ ತಪ್ಪದೆ ಮತದಾನ ಮಾಡಬೇಕು’ ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಹೇಳಿದರು.

ವಿಜಯನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಯುವ ಮತದಾರರ ನೋಂದಣಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಪ್ರಜಾಪ್ರಭುತ್ವ ಉಳಿಸಲು ನೀವೆಲ್ಲರೂ ನಿಮ್ಮ ಶಕ್ತಿ ಉಪಯೋಗಿಸಬೇಕು. ಬದಲಾವಣೆ ತರುವ ಶಕ್ತಿ ಯುವಸಮೂಹದಲ್ಲಿದ್ದು, ಅದನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಲು ಅರ್ಜಿ ಸಲ್ಲಿಸಬಹುದು ಎಂದರು.

ವಿಜಯನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸುಮಾರು 4 ಸಾವಿರ ವಿದ್ಯಾರ್ಥಿಗಳಿದ್ದು, ಒಂದು ಸಾವಿರಕ್ಕೂ ಹೆಚ್ಚು ಯುವಕರನ್ನು ಮತದಾರರ ಪಟ್ಟಿಗೆ ನೋಂದಣಿ ಮಾಡಿಸಲಾಗುತ್ತಿದೆ ಎಂದು ಶಿಕ್ಷಕರು ಮಾಹಿತಿ ನೀಡಿದರು.

ಜಿಲ್ಲಾ ಸ್ವೀಪ್ ಮೇಲ್ವಿಚಾರಣಾ ಸಮಿತಿ ಅಧ್ಯಕ್ಷ ಕಾಂತರಾಜು, ಸ್ವೀಪ್ ನೋಡಲ್ ಅಧಿಕಾರಿ ಪೂರ್ಣಿಮಾ, ಕಾಲೇಜಿನ ಪ್ರಾಂಶುಪಾಲ ವೈ. ವೆಂಕಟೇಶಪ್ಪ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.