ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಯುವ ಮತದಾರರ ನೋಂದಣಿ ಕಾರ್ಯಕ್ರಮ

Published 18 ನವೆಂಬರ್ 2023, 14:23 IST
Last Updated 18 ನವೆಂಬರ್ 2023, 14:23 IST
ಅಕ್ಷರ ಗಾತ್ರ

ಬೆಂಗಳೂರು: ಬಿ‌ಎಂಎಸ್ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ‘ಯುವ ಮತದಾರರ ನೋಂದಣಿ’ ಕಾರ್ಯಕ್ರಮವನ್ನು ಶನಿವಾರ ಆಯೋಜಿಸಲಾಗಿತ್ತು.

ಬಿಬಿಎಂಪಿ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಆರ್. ರಾಮಚಂದ್ರನ್ ಅವರು ಕಾರ್ಯಕ್ರಮ ಉದ್ಘಾಟಿಸಿ, 18 ವರ್ಷ ತುಂಬಿದ ಎಲ್ಲ ಯುವ ಜನಾಂಗ ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.

ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತದಾರರ ಜಾಗೃತಿ ವೇದಿಕೆ ಮತ್ತು ಚುನಾವಣಾ ಸಾಕ್ಷರತಾ ಕ್ಲಬ್‌ಗಳನ್ನೂ ಉದ್ಘಾಟಿಸಿದರು.

ಬಿ‌ಎಂಎಸ್ ಮಹಿಳಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಡಾ. ಬಿ. ಪದ್ಮ, ಚುನಾವಣಾ ಸಾಕ್ಷರತಾ ಕ್ಲಬ್ ನ ಸಂಚಾಲಕಿ ಡಾ. ಕೆ ವೀಣಾ, ಸಂಯೋಜಕಿ ಶ್ರೀಮತಿ ಬಿ. ಭಾನು ಹಾಗೂ  ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT