ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟ ಚರಣ್‌ ರಾಜ್‌ ಸೇರಿ ಮೂವರಿಗೆ ‘ಯುಗಾದಿ ಪುರಸ್ಕಾರ’

Published 12 ಏಪ್ರಿಲ್ 2024, 15:53 IST
Last Updated 12 ಏಪ್ರಿಲ್ 2024, 15:53 IST
ಅಕ್ಷರ ಗಾತ್ರ

ಬೆಂಗಳೂರು: ತೆಲುಗು ವಿಜ್ಞಾನ ಸಮಿತಿ ವತಿಯಿಂದ ನೀಡಲಾಗುವ 2024ನೇ ಸಾಲಿನ ‘ಯುಗಾದಿ ವಿಶಿಷ್ಟ ಪುರಸ್ಕಾರ’ಕ್ಕೆ ಬಹುಭಾಷಾ ನಟ ಚರಣ್‌ ರಾಜ್, ‘ಯುಗಾದಿ ಸಾಹಿತ್ಯ ಪುರಸ್ಕಾರ’ಕ್ಕೆ ಸಾಹಿತಿ ಕಮಲಾ ಹಂಪನಾ ಹಾಗೂ ತೆಲುಗು ಕವಯಿತ್ರಿ ಮೃಣಾಲಿನಿ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ತಲಾ ₹10ಸಾವಿರ ನಗದು, ಸ್ಮರಣಿಕೆಯನ್ನು ಒಳಗೊಂಡಿದೆ. ವೈಯ್ಯಾಲಿಕಾವಲ್‌ನಲ್ಲಿರುವ ತೆಲುಗು ವಿಜ್ಞಾನ ಸಮಿತಿಯ ಶ್ರೀಕೃಷ್ಣದೇವರಾಯ ಕಲಾಮಂದಿರದಲ್ಲಿ ಇದೇ 14ರಂದು ‘ಯುಗಾದಿ ಉತ್ಸವ’ ನಡೆಯಲಿದ್ದು, ಈ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಸಮಾರಂಭಕ್ಕೆ ಸಾಹಿತಿ ಚಂದ್ರಶೇಖರ ಕಂಬಾರ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ತೆಲುಗು ವಿಜ್ಞಾನ ಸಮಿತಿಯ ಅಧ್ಯಕ್ಷ ಎ. ರಾಧಾಕೃಷ್ಣರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT