ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಹೃದಯ, ಶ್ವಾಸಕೋಶ ಸಾಗಿಸಲು ಪೊಲೀಸರಿಂದ ಸಿಗ್ನಲ್ ಮುಕ್ತ ರಸ್ತೆ

Published 1 ಮಾರ್ಚ್ 2024, 4:21 IST
Last Updated 1 ಮಾರ್ಚ್ 2024, 4:21 IST
ಅಕ್ಷರ ಗಾತ್ರ

ಬೆಂಗಳೂರು: ಮಿದುಳು ನಿಷ್ಕ್ರಿಯಗೊಂಡಿದ್ದ ವ್ಯಕ್ತಿಯೊಬ್ಬರ ಹೃದಯ ಹಾಗೂ ಶ್ವಾಸಕೋಶವನ್ನು ಬೇರೆ ವ್ಯಕ್ತಿಗಳಿಗೆ ಅಳವಡಿಸಲು ಕೊಂಡೊಯ್ಯುತ್ತಿದ್ದ ಆಂಬುಲೆನ್ಸ್‌ ಸಂಚಾರಕ್ಕೆ ಪೊಲೀಸರು ಗುರುವಾರ ಗ್ರೀನ್ ಕಾರಿಡಾರ್ ವ್ಯವಸ್ಥೆ ಮಾಡಿಕೊಟ್ಟರು.

ಹೆಬ್ಬಾಳದ ಆಸ್ಟರ್ ಸಿಎಂಐ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಮಿದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದರು. ಇವರ ಅಂಗಾಂಗಗಳನ್ನು ಕುಟುಂಬದವರು ದಾನ ಮಾಡಿದ್ದರು.

ವ್ಯಕ್ತಿಯ ಹೃದಯವನ್ನು ಚೆನ್ನೈನಲ್ಲಿರುವ ಆಸ್ಪತ್ರೆಯೊಂದರಲ್ಲಿ ರೋಗಿಯೊಬ್ಬರಿಗೆ ಅಳವಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು.

ವಿಶೇಷ ಪೆಟ್ಟಿಗೆಯಲ್ಲಿ ಹೃದಯವನ್ನು ಆಸ್ಪತ್ರೆಯಿಂದ ಆಂಬುಲೆನ್ಸ್‌ನಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಿಗ್ನಲ್ ಮುಕ್ತ ರಸ್ತೆಯಲ್ಲಿ ಕೊಂಡೊಯ್ಯಲಾಯಿತು. ಕರ್ತವ್ಯದಲ್ಲಿದ್ದ ಸಂಚಾರ ಪೊಲೀಸರು, ಆಂಬುಲೆನ್ಸ್‌ ತಡೆರಹಿತವಾಗಿ ಸಂಚರಿಸಲು ಅನುಕೂಲ ಮಾಡಿಕೊಟ್ಟರು. ವಿಮಾನದಲ್ಲಿ ಹೃದಯವನ್ನು ಚೆನ್ನೈಗೆ ಕಳುಹಿಸಲಾಯಿತು.

ಅದೇ ವ್ಯಕ್ತಿಯ ಶ್ವಾಸಕೋಶವನ್ನು ಜೆ.ಪಿ.ನಗರದ ಆರ್‌.ವಿ. ಆಸ್ಟರ್ ಆಸ್ಪತ್ರೆಯಲ್ಲಿರುವ ರೋಗಿಗೆ ಕಸಿ ಮಾಡಲಾಯಿತು. ಶ್ವಾಸಕೋಶ ಕೊಂಡೊಯ್ಯಲು ಸಹ ಪೊಲೀಸರು, ಗ್ರೀನ್ ಕಾರಿಡಾರ್ ವ್ಯವಸ್ಥೆ ಮಾಡಿಕೊಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT