ಭಾನುವಾರ, ಸೆಪ್ಟೆಂಬರ್ 20, 2020
22 °C
ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರದಿಂದ ಔಷಧ ವೆಚ್ಚ ಮರುಪಾವತಿ

‘ರೆಮಿಡಿಸಿವಿರ್’ ಔಷಧ ಒದಗಿಸಲು ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರ್ಕಾರ ಶಿಫಾರಸು ಮಾಡುವ ಕೋವಿಡ್ ಪೀಡಿತರಿಗೆ ಖಾಸಗಿ ಆಸ್ಪತ್ರೆಗಳು ‘ರೆಮಿಡಿಸಿವಿರ್’ ಔಷಧವನ್ನು ಒದಗಿಸಬೇಕು. ಈ ಔಷಧ ಖರೀದಿಯ ವೆಚ್ಚವನ್ನು ಆಸ್ಪತ್ರೆಗಳಿಗೆ ಮರುಪಾವತಿಸಲಾಗುವುದು ಎಂದು ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಜಾವೇದ್ ಅಖ್ತರ್ ತಿಳಿಸಿದ್ದಾರೆ. 

‘ರೆಮಿಡಿಸಿವಿರ್’ ಔಷಧವನ್ನು ಕೊರೊನಾ ಸೋಂಕಿತರ ಚಿಕಿತ್ಸೆಗೆ ಬಳಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಹೀಗಾಗಿ ರಾಜ್ಯದ  ಸರ್ಕಾರಿ ಆಸ್ಪತ್ರೆಗಳಲ್ಲಿ ಸೋಂಕಿತರ ಚಿಕಿತ್ಸೆಗೆ ಈ ಔಷಧವನ್ನು ಬಳಸಲಾಗುತ್ತಿದೆ. ಶಿಫಾರಸು ಅನುಸಾರ ದಾಖಲಿಸಿಕೊಂಡ ಸೋಂಕಿತರ ಚಿಕಿತ್ಸೆಗೆ ಎಷ್ಟು ಪ್ರಮಾಣದಲ್ಲಿ ಔಷಧದ ಅಗತ್ಯವಿದೆ ಎನ್ನುವುದರ ಬಗ್ಗೆ ಜಿಲ್ಲಾ ಸಂಯೋಜಕರು, ಪ್ರಾದೇಶಿಕ ಸಲಹೆ ಗಾರರ ಮೂಲಕ ಖಾಸಗಿ ಆಸ್ಪತ್ರೆಗಳು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ಗೆ ಬೇಡಿಕೆ ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ. 
ಬೇಡಿಕೆ ಯನ್ನು ಪರಿಶೀಲಿಸಿದ ಬಳಿಕ ಟ್ರಸ್ಟ್, ಅಗತ್ಯ ಪ್ರಮಾಣದಲ್ಲಿ ಔಷಧ ಒದಗಿಸಲು ಕರ್ನಾಟಕ ಸ್ಟೇಟ್ ಡ್ರಗ್ಸ್ ಲಾಜಿಸ್ಟಿಕ್ ಮತ್ತು ವೇರ್ ಹೌಸಿಂಗ್ ಸೊಸೈಟಿಗೆ ಸೂಚಿ ಸಲಿದೆ.

ಖಾಸಗಿ ಆಸ್ಪತ್ರೆಗಳು ಸಂಬಂಧಿಸಿದ ರೋಗಿಗಳ ಹೆಸರಲ್ಲಿ ಈ ಇಂಜೆಕ್ಷನ್ ಪಡೆಯಬೇಕು. ರೋಗಿಯ ಸಂಖ್ಯೆ ಮತ್ತು ದೂರವಾಣಿ ಸಂಖ್ಯೆಯ ಮಾಹಿತಿಯನ್ನು ಟ್ರಸ್ಟ್‌ಗೆ ಸಲ್ಲಿಸಿ, ಚಿಕಿತ್ಸೆ ನೀಡಬಹುದಾಗಿದೆ ಎಂದು ತಿಳಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು