ಬೆಂಗಳೂರು: ಅಂತರರಾಷ್ಟ್ರೀಯ ಮಟ್ಟದ ಯೋಗ, ಪ್ರಕೃತಿ ಚಿಕಿತ್ಸೆ ಮತ್ತು ಆರೋಗ್ಯ ವಸ್ತು ಪ್ರದರ್ಶನ ಮತ್ತು ಸಮ್ಮೇಳನ ಫೆಬ್ರುವರಿ 9ರಿಂದ 13ರವರೆಗೆ ನಗರದಲ್ಲಿ ನಡೆಯಲಿದೆ.
ಈ ಸಂದರ್ಭದಲ್ಲಿ ಸಮ್ಮೇಳನದಲ್ಲಿ ನೀಡುವ ಆಹಾರ ಕೂಡ ಪ್ರಕೃತಿ ಚಿಕಿತ್ಸೆಗೆ ಪೂರಕವಾಗಿಯೇ ಇರುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ.ರಾಮದಾಸ್ ಹೇಳಿದರು.
ಫೆ.10ರಂದು ಸಮ್ಮೇಳನದ ಉದ್ಘಾಟನೆ ನಡೆಯಲಿದೆ. ಆ ಸಂದರ್ಭದಲ್ಲಿ ಕೇಂದ್ರ ಆರೋಗ್ಯ ಸಚಿವ ಗುಲಾಂ ನಬಿ ಅಜಾದ್, ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಸೇರಿದಂತೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಯೋಗ ತಜ್ಞರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.