ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನ್‌ಲೈನ್ ಅರ್ಜಿ ಸಮಸ್ಯೆ: ತಾಂತ್ರಿಕ ತೊಂದರೆ ಕಾರಣ

Last Updated 7 ಮೇ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಹಾಗೂ ಪ್ರೌಢಶಾಲಾ ಸಹ ಶಿಕ್ಷಕರ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ಇದೇ 5ರಂದು (ಶನಿವಾರ) ಸಮಸ್ಯೆ ಕಂಡುಬಂದಿತ್ತು. ಸರ್ವರ್‌ನಲ್ಲಿ ಕಂಡುಬಂದ ತಾಂತ್ರಿಕ ತೊಂದರೆಯ ಕಾರಣ ಈ ಸಮಸ್ಯೆ ಎದುರಾಗಿತ್ತು ಎಂದು ಕೇಂದ್ರೀಕೃತ ದಾಖಲಾತಿ ಘಟಕ ಹೇಳಿದೆ.

ತಾಂತ್ರಿಕ ಸಮಸ್ಯೆಯನ್ನು ಮಾರನೆಯ ದಿನ (ಭಾನುವಾರ) ರಾತ್ರಿ ಸರಿಪಡಿಸಲಾಗಿದೆ. ನಂತರ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯಲ್ಲಿ ಸಮಸ್ಯೆ ಕಂಡುಬಂದಿಲ್ಲ ಎಂದು ವಿಶೇಷ ಅಧಿಕಾರಿಗಳು ತಿಳಿಸಿದ್ದಾರೆ.
ಭಾನುವಾರದ ಅಂತ್ಯದ ವೇಳೆ ಉಪನ್ಯಾಸಕರ ಹುದ್ದೆಗೆ 89,933 ಅರ್ಜಿಗಳು ಸಲ್ಲಿಕೆಯಾಗಿವೆ. ಅವುಗಳಲ್ಲಿ 40,052 ಅರ್ಜಿಗಳು ಸ್ವೀಕೃತಗೊಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT