ಬೆಂಗಳೂರು: ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಶನಿವಾರದಿಂದ (ಜ.4) ವಾಹನಗಳ ಗಾಜುಗಳಿಗೆ ಅಳವಡಿಸಿರುವ ಕೂಲಿಂಗ್ ಪೇಪರ್ (ಫಿಲ್ಮ್) ತೆಗೆಯುವ ಕಾರ್ಯಾಚರಣೆ ಹಮ್ಮಿಕೊಳ್ಳಲಾಗುವುದು ಎಂದು ನಗರ ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ. ನ್ಯಾಯಾಲಯದ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಕಾರ್ಯಾಚರಣೆ ನಡೆಸಲಾಗುತ್ತಿದೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ಕೋರಲಾಗಿದೆ.