ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗ ಭದ್ರತೆ ಒದಗಿಸಿ

Last Updated 1 ಅಕ್ಟೋಬರ್ 2011, 19:35 IST
ಅಕ್ಷರ ಗಾತ್ರ

ಬೆಂಗಳೂರು: `ಗ್ರಾಮೀಣ ಆರೋಗ್ಯ ಮತ್ತು ನೈರ್ಮಲ್ಯ ಕಾಪಾಡುವಲ್ಲಿ ಆಶಾ ಕಾರ್ಯಕರ್ತೆಯರು ಶ್ರಮವಹಿಸುತ್ತಿದ್ದಾರೆ. ಆದರೆ ಅವರ ಜೀವನ ಭದ್ರತೆ ಆಶಾದಾಯಕವಾಗಿಲ್ಲ~ ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅಭಿಪ್ರಾಯಪಟ್ಟರು.
 
ಕರ್ನಾಟಕ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘವು ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆಶಾ ಕಾರ್ಯಕರ್ತೆಯರ ಕುರಿತ ರಾಜ್ಯಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.
`ಗ್ರಾಮೀಣದ ಭಾಗದಲ್ಲಿ ರೋಗಗಳು ಹರಡದಂತೆ ನಿಯಂತ್ರಿಸುವಲ್ಲಿ ಆಶಾ ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದ್ದು, ಸರ್ಕಾರ ಅವರಿಗೆ ಸೂಕ್ತ ಉದ್ಯೋಗ ಭದ್ರತೆ ಒದಗಿಸುವ ಮೂಲಕ ಗ್ರಾಮೀಣ ಜನರ ಆರೋಗ್ಯ ರಕ್ಷಣೆಗೆ ಪಣತೊಡಬೇಕಿದೆ~ ಎಂದು ಹೇಳಿದರು.

ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನದ ನಿರ್ದೇಶಕ ಸೆಲ್ವಕುಮಾರ್, `ಆಶಾ ಕಾರ್ಯಕರ್ತರು ಎದುರಿಸುತ್ತಿರುವ ಸಮಸ್ಯೆಗಳು ಈಗಾಗಲೇ ಗಮನಕ್ಕೆ ಬಂದಿದ್ದು, ಈ ಬಗ್ಗೆ ಜಿಲ್ಲಾ ಮಟ್ಟದಲ್ಲಿ ಆಶಾ ಸೌಲಭ್ಯ ಕೇಂದ್ರವನ್ನು ತೆರೆಯುವ ಕುರಿತು ಚಿಂತನೆ ನಡೆಸಲಾಗಿದೆ~ ಎಂದರು.

`ಕಾರ್ಯಕರ್ತೆಯರಿಗೆ ನಿಗದಿತ ವೇತನ ಮತ್ತು ಸಾರಿಗೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸಂಬಂಧ ಅಧಿಕಾರಿಗಳೊಂದಿಗೆ ಮನವಿ ಪತ್ರ ನೀಡಲಾಗಿದ್ದು, ಸಕಾರತ್ಮಾಕವಾಗಿ ಪ್ರತಿಕ್ರಿಯೆ ದೊರೆತಿದೆ. ಆಸ್ಪತ್ರೆಯಲ್ಲಿ ಕಾರ್ಯಕರ್ತೆಯರು ಸಿಬ್ಬಂದಿಯಿಂದ ಎದುರಿಸುತ್ತಿರುವ ಕಿರುಕುಳದ ಬಗ್ಗೆ ಈಗಾಗಲೇ ಸಂಬಂಧಪಟ್ಟವರಿಗೆ ದೂರು ನೀಡಲಾಗಿದೆ~  ಎಂದರು. ಸಂಘದ ಅಧ್ಯಕ್ಷೆ ಎಸ್.ವರಲಕ್ಷ್ಮಿ, ಪ್ರಧಾನ ಕಾರ್ಯದರ್ಶಿ ಮಾಲಿನಿ ಮೇಸ್ತ ಇತರರು ಉಪಸ್ಥಿತರಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT