ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೀಡುವ 2012 ಮತ್ತು 2013ರ ಸಾಲಿನ ಟಿಯೆಸ್ಸಾರ್ ಸ್ಮಾರಕ ಪ್ರಶಸ್ತಿ, ಮೊಹರೆ ಹಣಮಂತರಾಯ ಪ್ರಶಸ್ತಿ, ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಯನ್ನು ಸಿ.ಎಂ ಸಿದ್ದರಾಮಯ್ಯ ಪ್ರದಾನ ಮಾಡಿದರು.

2012ನೇ ಸಾಲಿನ ಟಿಯೆಸ್ಸಾರ್ ಪ್ರಶಸ್ತಿಯನ್ನು ಎನ್. ಅರ್ಜುನ್ ದೇವ ಅವರಿಗೆ, 2013ನೇ ಸಾಲಿನ ಪ್ರಶಸ್ತಿಯನ್ನು ಈಶ್ವರ ದೈತೋಟ ಅವರಿಗೆ ಪ್ರದಾನ ಮಾಡಿದರು. 2012ನೇ ಸಾಲಿನ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಯನ್ನು ರಾಘವೇಂದ್ರ ಅರವಿಂದರಾವ್ ಜೋಷಿ ಮತ್ತು 2013ನೇ ಸಾಲಿನ ಪ್ರಶಸ್ತಿಯನ್ನು ಕೆ.ಬಿ. ಗಣಪತಿ ಅವರಿಗೆ ನೀಡಲಾಯಿತು.

2012ನೇ ಸಾಲಿನ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿಯನ್ನು ಅಂಶಿ ಪ್ರಸನ್ನ ಕುಮಾರ್, 2013ನೇ ಸಾಲಿನ ಪ್ರಶಸ್ತಿಯನ್ನು ಡಾ.ಸದಾನಂದ ಪೆರ್ಲ, 2012ನೇ ಸಾಲಿನ ಪರಿಸರ ಪತ್ರಿಕೋದ್ಯಮ ಪ್ರಶಸ್ತಿಯನ್ನು ಡಾ. ನರೇಂದ್ರ ರೈ ದೇರ್ಲ ಮತ್ತು 2013ನೇ ಸಾಲಿನ ಪ್ರಶಸ್ತಿಯನ್ನು ದೀಪಕ್ ಸಾಗರ್ ಅವರಿಗೆ ಪ್ರದಾನ ಮಾಡಲಾಯಿತು. ಪ್ರಶಸ್ತಿಯು ತಲಾ ₨1ಲಕ್ಷ ನಗದು ಒಳಗೊಂಡಿದೆ.

ಕಾರ್ಯಕ್ರಮದಲ್ಲಿ ವಾರ್ತಾ ಸಚಿವ ಆರ್.ರೋಷನ್ ಬೇಗ್, ಆಯ್ಕೆ ಸಮಿತಿ ಅಧ್ಯಕ್ಷರಾಗಿದ್ದ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಅರಳಿ ನಾಗರಾಜ್, ಮಾಧ್ಯಮ ಅಕಾಡಮಿ ಅಧ್ಯಕ್ಷ ಎಂ.ಎ.ಪೊನ್ನಪ್ಪ, ವಾರ್ತಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ನಾಗಾಂಬಿಕಾ ದೇವಿ, ನಿರ್ದೇಶಕ ಎನ್.ಆರ್. ವಿಶುಕುಮಾರ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.