ಬೆಂಗಳೂರು: ಸೋಮವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ ಒಣಹವೆ ಮುಂದುವರಿದಿದೆ. ವಿಜಾಪುರದಲ್ಲಿ ಕನಿಷ್ಠ ಉಷ್ಣಾಂಶ 8.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮುನ್ಸೂಚನೆ: ಮುಂದಿನ 48 ಗಂಟೆ ಗಳವರೆಗೂ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.